ಜೆಡಿಎಸ್ ಜೊತೆ ಮೈತ್ರಿ ಮುಂದುವರೆಸಿದರೆ ನಮ್ಮ ಅಭ್ಯಂತರವಿಲ್ಲ: ಚೆಲುವ ರಾಯಸ್ವಾಮಿ

ಬೆಂಗಳೂರು,ನ 11- ಚುನಾವಣೆಯಲ್ಲಿ ಜೆಡಿಎಸ್ ಜೊತೆ ಕಾಂಗ್ರೆ ಸ್ ಮೈತ್ರಿ ಬಗ್ಗೆ ಚರ್ಚೆ ಮಾಡಿಲ್ಲ.ಅದೇನಿದ್ದರೂ ಹೈಕಮಾಂಡ್ ಹಂತದಲ್ಲಿ ನಡೆ ಯಬೇಕು.ಒಂದು ವೇಳೆ ಮತ್ತೆ ಜೆಡಿಎಸ್ ಜೊತೆ ಮೈತ್ರಿಗೆ ಮುಂದಾದರೆ ಅದಕ್ಕೆ ನಮ್ಮಅಭ್ಯಂತರವಿಲ್ಲ ಎಂದು ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ ಹೇಳಿ ದ್ದಾರೆ.

ಕೆಪಿಸಿಸಿ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾವು ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ.ನನಗೆ ವೈಯುಕ್ತಿಕವಾಗಿ ಮೈತ್ರಿ ಮುಂ ದುವರೆಸಿದರೆ ಯಾವುದೇ ಸಮಸ್ಯೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ನಾಯಕ ಯೋಗೇಶ್ವರ್ ಭೇಟಿ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಗಾಳಿ ಸುದ್ದಿಗಳನ್ನು ಮಾಡೋದು ಬೇಡ,ಚಹಾ,ತಿಂಡಿ ತಿಂದರೆ ಅದಕ್ಕೆ ಬೇರೆ ಅರ್ಥ ಬೇಕಿಲ್ಲ,ಯೋಗೇಶ್ವರ್ ಜೊತೆ ತಮಗೆ ಉತ್ತಮ ಸ್ನೇಹ ಸಂಬಂಧ ಇರುವುದು ನಿಜ.ನಾವು ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ,ಕಾಫಿ ತಿಂಡಿ ತಿಂದ ಮಾತ್ರಕ್ಕೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರು ತ್ತಾರೆ ಎನ್ನುವುದು ಸುಳ್ಳು.ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ ಬರುವವರು ಪಕ್ಷಕ್ಕೆ ಬರಲಿ,ನಾವು ಅದಕ್ಕೆ ಸ್ವಾಗತ ಮಾಡುತ್ತೇವೆ ಎಂದು ಅವರು ತಿಳಿಸಿದರು.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆದಿದೆ.ಹಿರಿಯರು ಸಲಹೆಗಳನ್ನು ನೀಡಿದ್ದಾರೆ.ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ.ಇದು ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ.ಆರ್ಥಿಕ ಹಿಂಜ ರಿತ,ಗಾಂಧಿ ಕುಟುಂಬಕ್ಕೆ ಎಸ್ಪಿಜಿ ಭದ್ರತೆ ಹಿಂಪಡೆದಿರುವುದು,ನಿರುದ್ಯೋಗ ಸಮಸ್ಯೆ ಇತ್ಯಾದಿ ವಿಚಾರಗಳ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.

ಅನೈತಿಕವಾಗಿ ಯಡಿಯೂರಪ್ಪ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ.ಪ್ರ ವಾಹ ಸಂತ್ರಸ್ಥರ ಸಮಸ್ಯೆ ಪರಿಹರಿಸಿಲ್ಲ.ನೆರೆ ಪರಿಹರಿಸುವಲ್ಲಿ ರಾಜ್ಯ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ.ದೇಶ ಕವಲು ದಾರಿಯತ್ತ ಹೊರಟಿದೆ.ಇಂದಿನ ಪ್ರತಿಭಟನೆ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತೇವೆ ಎಂದರು.

ಪಕ್ಷದ ಬೆನ್ನಿಗೆ ಚೂರಿ ಹಾಕಿ ನಮ್ಮವರೇ ಪಕ್ಷ ತೊರೆದು ಹೋಗಿದ್ದಾರೆ.ಆ 15 ಕ್ಷೇತ್ರ ಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲ್ಲುತ್ತಾರೆ. ನಮ್ಮ ಪಕ್ಷದ ವರಿಷ್ಠರು ಇದರ ಬಗ್ಗೆ ಸೂಕ್ತ ತೀರ್ಮಾನ ಮಾಡುತ್ತಾರೆ.ರಾಜುಕಾಗೆ, ಅಶೋಕ್ ಪೂಜಾರಿ ಅವರ ಬಗ್ಗೆಯೂ ತೀರ್ಮಾನ ಮಾಡುತ್ತಾರೆ ಎಂದರು.

Leave a Comment