ಜೆಡಿಎಸ್ ಪಕ್ಷವನ್ನು ಬಲಪಡಿಸಲು ಕರೆ

ಹೊಸಪೇಟೆ.ಜೂ.19 ಮುಂಬರುವ ದಿನಗಳಲ್ಲಿ ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಬಲಪಡಿಸುವ ಮೂಲಕ ಅಧಿಕಾರಕ್ಕೆ ತರಲು ಶ್ರಮಿಸುವಂತೆ ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಶಫಿ ಬರಕಾತಿ ಹೇಳಿದರು.

ಸ್ಥಳೀಯ ಖಾಸಗಿ ಹೋಟೆಲ್ ನಲ್ಲಿ ಇತ್ತೀಚೆಗೆ ಜರುಗಿದ ವಿಜಯನಗರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು,

ಜೆಡಿಎಸ್ ಪಕ್ಷವು ರೈತರ ಪಕ್ಷವಾಗಿದೆ. ಕಾಂಗ್ರೆಸ್-ಬಿಜೆಪಿ ಪಕ್ಷಗಳು ಇಂದು ನಾಣ್ಯದ ಎರಡು ಮುಖಗಳಿದ್ದಂತೆ. ಇವೆರಡು ಪಕ್ಷಗಳಿಂದ ರೈತರು ಏನು ನಿರೀಕ್ಷೆ ಮಾಡುವಂತಿಲ್ಲ. ರೈತಪರ ಹೋರಾಡುವ ಪಕ್ಷವಿದ್ದರೆ ಅದು ಜೆಡಿಎಸ್ ಮಾತ್ರ. ಅದಕ್ಕಾಗಿ ಕಾರ್ಯಕರ್ತರು ಈಗಿನಿಂದಲೇ ಪಕ್ಷವನ್ನು ಸಂಘಟಿಸುವತ್ತ ಗಮನ ಹರಿಸಬೇಕು ಎಂದರು.

ಈಗಾಗಲೇ ಕ್ಷೇತ್ರದಾದ್ಯಂತ ಹಳ್ಳಿ ಹಳ್ಳಿಗೆ ಹೋಗಿ ಕಾರ್ಯಕರ್ತರನ್ನು ಭೇಟಿ ಮಾಡಿ, ಪಕ್ಷ ಸಂಘಟನೆಯಲ್ಲಿ ತೊಡಗುವಂತೆ ಮನವಿ ಮಾಡಿಕೊಳ್ಳಲಾಗಿದೆ. ಮಂದಿನ ದಿನಗಳಲ್ಲಿ ಇಡೀ ಕ್ಷೇತ್ರದಾದ್ಯಂತ ಸಂಚರಿಸಿ ದೊಡ್ಡ ಮಟ್ಟದಲ್ಲಿ ಸಮಾವೇಶವನ್ನು ನಡೆಸಲಾಗುವುದು ಎಂದರು.
ಸಭೆಯಲ್ಲಿ ಮುಖಂಡರಾದ ಕೆ.ಕೊಟ್ರೇಶ್, ಕೆ.ಕೃಷ್ಣ, ದೊಡ್ಡರಾಮಣ್ಣ, ಸೋಮಶೇಖರ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

Leave a Comment