ಜೆಡಿಎಸ್ ಯುವ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ದಾವಣಗೆರೆ, ಮಾ.20- ಅಶೋಕ ರಸ್ತೆಯ ರೈಲ್ವೆ ಗೇಟ್ ನಿಂದಾಗಿ ಪ್ರತಿನಿತ್ಯ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೂಡಲೇ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಯುವ ಜನತಾದಳ ಕಾರ್ಯಕರ್ತರು ರೈಲ್ವೆ ಗೇಟ್ ಬಳಿ ಪ್ರತಿಭಟನೆ ನಡೆಸಿ ಸ್ಥಳಕ್ಕೆ ಆಗಮಿಸಿದ್ದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದರು.

ದಾವಣಗೆರೆ ಹಳೇ ಭಾಗಕ್ಕೆ ಸಂಪರ್ಕಿಸುವ ಸ್ಥಳ ಇದಾಗಿದ್ದು, ಪ್ರತಿದಿನ ಇಲ್ಲಿ 30 ಕ್ಕಿಂತ ಹೆಚ್ಚು ಬಾರಿ ರೈಲ್ವೆ ಗೇಟ್ ಹಾಕಲಾಗುತ್ತಿದೆ. ಈ ಸಂದರ್ಭದಲ್ಲಿ ಆಟೋ, ಕಾರು, ಕೈಗಾಡಿ, ದ್ವಿಚಕ್ರ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ 40 ವರ್ಷಗಳಿಂದ ಈ ಸಮಸ್ಯೆ ಇದೆ.ಹಣದ ಕೊರತೆ ಹಾಗೂ ತಾಂತ್ರಿಕ ಅಡಚಣೆ ಕಾರಣ ಹೇಳುತ್ತಾ ಮುಂದೂಡುತ್ತಾ ಸಮಸ್ಯೆಯನ್ನು ನಿರ್ಲಕ್ಷಿಸಲಾಗುತ್ತಿದೆ. ಆದರೆ ಇದೀಗ ಯೋಜನೆಗೆ 37ಕೋಟಿ ಅನುದಾನ ಮಂಜೂರಾಗಿ ವರ್ಷಗಳೇ ಕಳೆದಿವೆ. ಆದರು ಸಹ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡಲು ನಿರ್ಲಕ್ಷ್ಯ ವಹಿಸುತ್ತಿರುವುದು ಸರಿಯಲ್ಲ. ಈ ಕೂಡಲೇ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ಕಾಮಗಾರಿ ಪ್ರಾರಂಭಿಸಲು ಒತ್ತು ನೀಡಬೇಕು ಎಂದು ಮನವಿ ಮಾಡಿದರು. ಈ ವೇಳೆ ಜೆ.ಅಮಾನುಲ್ಲಾ ಖಾನ್, ಟಿ.ಅಜ್ಗರ್, ಖಾದರ್ ಬಾಷಾ, ಶ್ರೀನಿವಾಸ್, ಹನುಮಂತಪ್ಪ, ರವಿ, ಅಲ್ತಾಫ್ ಹುಸೇನ್ ಸೇರಿದಂತೆ ಅನೇಕರಿದ್ದರು.

Leave a Comment