ಜೆ.ಎನ್.ಯು ಆವರಣದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ-ಪರಿಸ್ಥಿತಿ ನಿಯಂತ್ರಣಕ್ಕೆ ಜಲಫಿರಂಗಿ ಪ್ರಯೋಗ

 ರಣಾಂಗಣವಾದ ಜೆ.ಎನ್.ಯು ಆವರಣ

ನವದೆಹಲಿ :ಶುಲ್ಕ ಹೆಚ್ಚಳ ಹಾಗೂ ಹೊಸ ಹಾಸ್ಟೆಲ್ ನಿಯಮಾವಳಿಗಳ ಪ್ರಸ್ತಾವವನ್ನು ವಿರೋಧಿಸಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಘಟಿಕೋತ್ಸವದ ವೇಳೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭಾಷಣ ಮಾಡುತ್ತಿದ್ದ ವೇಳೆ ಐಐಸಿಟಿಇ ಆಡಿಟೋರಿಯಂಗೆ ನುಗ್ಗಲು ಪ್ರತಿಭಟನಾಕಾರರು ಯತ್ನ ನಡೆಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸವನ್ನೇ ನಡೆಸಿದರು. ಈ ವೇಳೆ, ಪ್ರತಿಭಟನಾಕಾರರ ಮೇಲೆ ಜಲಫಿರಂಗಿ ಪ್ರಯೋಗಿಸಲಾಯಿತು.

ಶುಲ್ಕದಲ್ಲಿ ಹಿಂದಿನದ್ದಕ್ಕಿಂತ ಶೇ. 999ರಷ್ಟು ಹೆಚ್ಚಳವಾಗಿದೆ. ಜೆಎನ್ಯುನಲ್ಲಿರುವ ಶೇ. 40ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಬಡತನ ರೇಖೆಗಿಂತ ಕಡಿಮೆ ಆದಾಯವಿರುವ ಕುಟುಂಬದಿಂದ ಬಂದಿದ್ದು, ನೂತನ ಶುಲ್ಕ ಹೊರೆಯಾಗಲಿದೆ ಎಂದು ಜೆಎನ್.ಯು ವಿದ್ಯಾರ್ಥಿ ಒಕ್ಕೂಟ ಆರೋಪಿಸಿದೆ.

ಇಂದು ವಿದ್ಯಾರ್ಥಿಗಳು ಭಾರಿ ಪ್ರತಿಭಟನೆ ಹಿನ್ನೆಲೆ ಕ್ಯಾಂಪಸ್ ನ ಹಲವೆಡೆ ಬ್ಯಾರಿಕೇಡ್ ಗಳನ್ನು ಹಾಕಿ ಪ್ರತಿಭಟನೆ ನಿಯಂತ್ರಿಸಲು ಹರಸಾಹಸವನ್ನೇ ನಡೆಸಲಾಗಿದೆ. ಆದರೆ, ವಿದ್ಯಾರ್ಥಿಗಳು ಈ ಬ್ಯಾರಿಕೇಡ್ ಗಳನ್ನೇ ನುಗ್ಗಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇದೇ ವೇಳೆ, ತಮ್ಮನ್ನು ಭೇಟಿಯಾಗದ ಉಪಕುಲಪತಿ ಎಂ.ಜಗದೀಶ್ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಸಿಟ್ಟು ಹೊರಹಾಕಿದ್ದಾರೆ..

Leave a Comment