ಜೇಟ್ಲಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ, ಆ.24: ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ ಅರುಣ್ ಜೇಟ್ಲಿಯವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ‘ಮೌಲಿಕ ಗೆಳೆಯನನ್ನು ಕಳೆದುಕೊಂಡಿದ್ದೇನೆ’ ಎಂದು ಹೇಳಿದ್ದಾರೆ.
‘ಅರುಣ್ ಜೇಟ್ಲಿ ಜೀ ಅವರ ನಿಧನದಿಂದ ನಾನು ಮೌಲಿಕ ಗೆಳೆಯನನ್ನು ಕಳೆದುಕೊಂಡಿದ್ದೇನೆ. ಸಮಸ್ಯೆಗಳ ಬಗ್ಗೆ ಒಳನೋಟ ಮತ್ತು ವಿಚಾರಗಳ ಬಗ್ಗೆ ಸೂಕ್ಷ್ಮ ತಿಳುವಳಿಕೆ ಅವರಿಗಿತ್ತು’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Leave a Comment