ಜ.21 ರಂದು ಪರಿವರ್ತನಾ ಱ್ಯಾಲಿ

ಕೊಳ್ಳೇಗಾಲ.ಜ.12- ಪರಿವರ್ತನಾ ಱ್ಯಾಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಬಿಜೆಪಿ ಮುಖಂಡ ನೂರೊಂದು ಶೆಟ್ಟಿ ಅವರು ಹೇಳಿದರು.
ಪಟ್ಟಣದ ಬಸವೇಶ್ವರನಗರದ 1ನೇ ಕ್ರಾಸ್‍ನ ಬಿಜೆಪಿ ಕಛೇರಿಯ ಆವರಣದಲ್ಲಿ ಭಾರತೀಯ ಜನತಾ ಪಾರ್ಟಿ ಪರಿವರ್ತನಾ ಱ್ಯಾಲಿಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಪರಿವರ್ತನಾ ಱ್ಯಾಲಿಗೆ ನಮ್ಮ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಪಕ್ಷದ ಹಲವಾರು ಗಣ್ಯರು ಆಗಮಿಸಲಿದ್ದಾರೆ. ಇದೇ ತಿಂಗಳು 21 ರಂದು ಎಂ.ಜಿ.ಎಸ್.ವಿ ಮೈದಾನದಲ್ಲಿ ಕಾರ್ಯಕ್ರಮವು ನಡೆಯಲಿರುವ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಮುಖಂಡ ಮಾಂಬಳ್ಳಿ ನಂಜುಂಡಸ್ವಾಮಿ ಮಾತನಾಡಿ, ಪ್ರತಿ ಬೂತ್‍ಗಳಲ್ಲಿ ಶಕ್ತಿಗಳಲ್ಲಿ ಕಾರ್ಯಕರ್ತರು ಸಮಾವೇಶಗೊಂಡು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕರೆತರುವ ಮೂಲಕ ಬಿಜೆಪಿ ಕಾರ್ಯಕರ್ತರ ಶಕ್ತ ಪ್ರದರ್ಶನ ತೋರಬೇಕು ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಮುಖಂಡರಾದ ಸರ್ವೇಶ್‍ಬಸವಯ್ಯ, ಪ್ರಭುಪ್ರಸಾದ್, ಚಂದ್ರಕಲಾಬಾಯಿ, ಜಿ.ಪಂ ಸದಸ್ಯ ಮುಳ್ಳೂರು ಕಮಲ್, ಟೌನ್ ಅಧ್ಯಕ್ಷ ರಮೇಶ್, ಕಾರ್ಯದರ್ಶಿ ರಮೇಶ್ ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರುಗಳೂ ಭಾಗವಹಿಸಿದರು.

Leave a Comment