ಟಿಪ್ಪರ್ – ಕಾರು ಡಿಕ್ಕಿ ಸ್ಥಳದಲ್ಲೇ ಇಬ್ಬರ ಸಾವು

ಮೈಸೂರು, ನ. ೧೭- ಟಿಪ್ಪರ್ ಮತ್ತು ಕಾರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಹುಣಸೂರು ತಾಲ್ಲೂಕಿನ ಚಿಲ್‌ಕುಂದ ಗ್ರಾಮದ ಬೋರೆಹೊಸಳ್ಳಿ ಗೇಟ್ ಬಳಿ ಟಿಪ್ಪರ್ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಟಿಪ್ಪರ್ ಕಾರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟವರನ್ನು ತಮಿಳುನಾಡು ಮೂಲದವರು ಎಂದು ಗುರುತಿಸಲಾಗಿದೆ. ಆದರೆ ಕಾರಿನಲ್ಲಿ ಮಗು ಅದೃಷ್ಟವಶಾತ್ ಪ್ರಾಣಾಪಯದಿಂದ ಪಾರಾಗಿದೆ. ಮೃತಪಟ್ಟವರು ಎಲ್ಲಿಯವರು ಎನ್ನುವ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಅಪಘಾತದಲ್ಲಿ ಗಾಯಗೊಂಡಿರುವ ಇತರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಹುಣಸೂರು ಪೊಲೀಸರು ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡ ತನಿಖೆ ಕೈಗೊಂಡಿದ್ದಾರೆ.

ಅಪಘಾತಕ್ಕೆ ಅತಿಯಾದ ವೇಗ ಹಾಗೂ ಚಾಲಕ ನಿರ್ಲಕ್ಷವೇ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ. ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ರಸ್ತೆ ಬದಿಯ ಹಳ್ಳದಲ್ಲಿ ಹುದುಗಿಹೋಗಿದ್ದ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

Leave a Comment