ಟೆನ್ನಿಸ್‍ಬಾಲ್ ಕ್ರಿಕೆಟ್ ಟೂರ್ನಿಯಲ್ಲಿ ಎಸ್.ಎಸ್.ಗಣೇಶ್

ದಾವಣಗೆರೆ.ಡಿ.5; ಮಾಜಿ ಸಚಿವರು, ಹಾಲಿ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪನವರ ಧರ್ಮಪತ್ನಿ ದಿ.ಪಾರ್ವತಮ್ಮ ಶಾಮನೂರು ಶಿವಶಂಕರಪ್ಪನವರ ಸವಿನೆನಪಿನ ಅಂಗವಾಗಿ ನಗರದ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕøತಿಕ ಸಂಘ ಹಾಗೂ ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಟಿನ್ನಿಸ್‍ಬಾಲ್ ಕ್ರಿಕೆಟ್ ಟೂರ್ನಿಯ ಆಫೀಶಿಯಲ್ ಕಪ್‍ನಲ್ಲಿ ಮರ್ಚೆಂಟ್ಸ್ ತಂಡದ ಪರವಾಗಿ ಉದ್ಯಮಿಗಳಾದ ಎಸ್.ಎಸ್.ಗಣೇಶ್ ಅವರು ಆಟವಾಡಿದರು.
ಇದೇ ವೇಳೆ ಕ್ರೀಡಾಪ್ರೋತ್ಸಾಹಕರಾದ ಎಸ್.ಎಸ್.ಗಣೇಶ್ ಅವರನ್ನು ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕøತಿಕ ಸಂಘ ಹಾಗೂ ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕøತಿಕ ಸಂಘದ ಅಧ್ಯಕ್ಷರು, ಪಾಲಿಕೆ ಸದಸ್ಯರಾದ ದಿನೇಶ್ ಕೆ ಶೆಟ್ಟಿ, ಉಪಾಧ್ಯಕ್ಷರಾದ ಶ್ರೀನಿವಾಸ್ ಶಿವಗಂಗಾ, ಎಸ್‍ಬಿಟಿ ಮಹಾದೇವ್, ಪ್ರಧಾನ ಕಾರ್ಯದರ್ಶಿ ಕುರುಡಿ ಗಿರೀಶ್ (ಸ್ವಾಮಿ), ಖಜಾಂಚಿ ಜಯಪ್ರಕಾಶ್ ಗೌಡ, ರಾಜುರೆಡ್ಡಿ, ಉದಯಶಿವಕುಮಾರ್, ಇನಾಯತ್, ರಮೇಶ್, ರವಿ ಇಳಂಗೋವನ್, ಟಾರ್ಗೇಟ್ ಅಸ್ಲಾಂ ಮತ್ತಿತರರಿದ್ದರು.

Leave a Comment