ಟೈರ್ ಸ್ಪೋಟಿಸಿ ಕಾರು ಪಲ್ಟಿ: ಇಬ್ಬರು ಸಾವು

 

ತುಮಕೂರು: ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಬಿದನಗೆರೆ ಬೈಪಾಸ್ ಬಳಿ ನಡೆದಿದೆ.

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬಿದನಗೆರೆ ಬೈಪಾಸ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ 37 ವರ್ಷದ ಮಹಿಳೆ ಹಾಗೂ 7 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ತಾಲೂಕು ಆಸ್ಪತ್ರೆಗೆ ಸೇರಿಸಲಾಗಿದೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Leave a Comment