ಟ್ರಕ್ ಉರುಳಿ ಮಕ್ಕಳು ಸೇರಿ ೭ ಮಂದಿ ಸಾವು

ಬದೌನ್, (ಉಪ್ರ) ಆ ೧೩- ಗೋಧಿ ಮೂಟೆ ತುಂಬಿದ ಲಾರಿಯೊಂದು ಉರುಳಿ ಬಿದ್ದು ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಮೃತಪಟ್ಟಿರುವ ಘಟನೆ ತಡರಾತ್ರಿ ಉತ್ತರ ಪ್ರದೇಶದ ಬದೌನ್‌ನಲ್ಲಿ ಸಂಭವಿಸಿದೆ.
ಲಾರಿ ಚಾಲಕ ಹಠಾತ್ತನೇ ಬ್ರೇಕ್ ಹಾಕಿದ್ದರಿಂದ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದುರ್ಘಟನೆಯಲ್ಲಿ ೫ ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಈ ಘಟನೆಯಿಂದ ಆಕ್ರೋಶಗೊಂಡ ಜನರು ಘೋಷಣೆ ಕೂಗಿದರು. ಕೂಡಲೇ ಮಧ್ಯ ಪ್ರವೇಶಿಸಿ ಉದ್ರಿಕ್ತ ಗುಂಪನ್ನು ಚದುರಿಸಿದರು. ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಲಾರಿ ಉರುಳಿ ಬಿದ್ದ ಪರಿಣಾಮ ಈ ಮಾರ್ಗದಲ್ಲಿ ಕೆಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಕ್ರೇನ್‌ನಿಂದ ಲಾರಿಯನ್ನು ತೆರವುಗೊಳಿಸಿದ ಬಳಿಕ ವಾಹನ ಸಂಚಾರ ಸುಗಮಗೊಂಡಿತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Comment