ಡಾ|| ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

ಬಳ್ಳಾರಿ, ಡಿ.6: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ||ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನಾಚರಣೆಯ ಅಂಗವಾಗಿ ಇಂದು ಹೊಸಪೇಟೆ ರಸ್ತೆಯಲ್ಲಿನ ಅಂಬೇಡ್ಕರ್ ಭವನದಲ್ಲಿರುವ ಅಂಬೇಡ್ಕರ್ ರವರ ಪ್ರತಿಮೆಗೆ ಜಿಲ್ಲಾಧಿಕಾರಿಗಳಾದ ರಾಮ್‍ಪ್ರಸಾತ್ ಮನೋಹರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಆರ್.ಚೇತನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ಮತ್ತು ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷರಾದ ಎ.ಮಾನಯ್ಯ ಅವರುಗಳು ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಡಾ|| ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನ ರಚಿಸುವ ಮೂಲಕ ದೇಶದಲ್ಲಿ ಸಾಮಾಜಿಕ ಸಮಾನತೆಗೆ ಅವಕಾಶ ಕಲ್ಪಿಸಿದ್ದಾರೆ. ಶೋಷಣಾ ರಹಿತ ಸಮಾಜದ ಕನಸನ್ನು ಕಂಡಿದ್ದರು ಎಂದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

 

Leave a Comment