ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಅದ್ಧೂರಿ ಮೆರವಣಿಗೆ

ರಾಯಚೂರು.ಏ.14- ಇಂದು ಜಿಲ್ಲಾಡಳಿತ, ಜಿ.ಪಂ.ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 128 ನೇ ಜನ್ಮ ದಿನಾಚರಣೆಯ ಅಂಗವಾಗಿ ಅತಿ ವಿಜೃಂಭಣೆಯಿಂದ ಅಂಬೇಡ್ಕರ್ ಅವರ ಭಾವಚಿತ್ರವನ್ನು ಅದ್ಧೂರಿಯಾಗಿ ಮೆರವಣಿಗೆ ಮಾಡಲಾಯಿತು. ನಗರದ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಜಿಲ್ಲಾಧಿಕಾರಿ ಬಿ.ಶರತ್ ಅವರು ಮಾಲಾರ್ಪಣೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಮೆರವಣಿಗೆಯು ಕಾರ್ಯಕ್ರಮ ನಡೆಯುವ ರಂಗಮಂದಿರಕ್ಕೆ ಬಂದು ತಲುಪಿತು.
ಈ ಸಂದರ್ಭದಲ್ಲಿ ಜಿ.ಪಂ.ಸಿಇಓ ನಲಿನ್ ಅತುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಕಿಶೋರ ಬಾಬು, ಸಹಾಯಕ ಆಯುಕ್ತೆ ಶಿಲ್ಪಾ ಶರ್ಮಾ, ಬಂತೇಜಿ ಮಹಾಸ್ವಾಮಿಗಳು, ನಗರಸಭೆ ಪೌರಾಯುಕ್ತ ರಮೇಶ ನಾಯಕ ಸೇರಿದಂತೆ ಸಮಾಜದ ಮುಖಂಡರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

Leave a Comment