ಡಿಕೆಶಿಗೆ ಅಧಿಕ ರಕ್ತದೊತ್ತಡ : ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಶಿಫ್ಟ್

ನವದೆಹಲಿ.ಸೆ.12.ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆ ಮುಂದುವರೆಸಿದ್ದಾರೆ. ಈ ಮಧ್ಯೆ, ಡಿಕೆಶಿ ಅವರಿಗೆ ಅನಾರೋಗ್ಯ ಉಂಟಾಗಿದ್ದು, ಅವರನ್ನು ಇಡಿ ಅಧಿಕಾರಿಗಳು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಡಿ.ಕೆ.ಶಿವಕುಮಾರ್ ಅವರಿಗೆ ಮಲಬದ್ಧತೆ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆ ಉಂಟಾಗಿದ್ದು, ಅವರನ್ನು ಇಡಿ ಅಧಿಕಾರಿಗಳು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಒಂದು ವೇಳೆ, ಮಲಬದ್ಧತೆ ಹಾಗೂ ರಕ್ತದೊತ್ತಡ ನಿಯಂತ್ರಣಕ್ಕೆ ಬರದಿದ್ದರೇ ಇಂದು ಡಿಕೆಶಿ ಅವರನ್ನು ಆಸ್ಪತ್ರೆಗೆ ಅಡ್ಮಿಟ್ ಮಾಡುವ ಸಾಧ್ಯತೆ ಇದೆ.

ಇಂದು ಪುತ್ರಿ ಐಶ್ವರ್ಯ ಇಡಿ ಕಚೇರಿಗೆ ಹಾಜರಾಗಿರುವ ಸುದ್ದಿ ಕೇಳುತ್ತಿದ್ದಂತೆ ಡಿಕೆಶಿ ಅವರು ಹೈ ಬಿಪಿಗೆ ಒಳಗಾಗಿದ್ದು , ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದಿದೆ. ಮಾನಸಿಕವಾಗಿ ಕೂಡ ಅವರು ಬಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಕುಟುಂಬ ವೈದ್ಯರು ರಂಗನಾಥ್ ಚಿಕಿತ್ಸೆ ನೀಡಿದ್ದಾರೆ. ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ಕೂಡ ವೈದ್ಯರು ತಿಳಿಸಿದ್ದಾರೆ.

ನಾಳೆ ಡಿಕೆಶಿ ಅವರ ಇಡಿ ಕಸ್ಟಡಿ ಅವಧಿ ಅಂತ್ಯಗೊಳ್ಳಲಿದೆ. ಮತ್ತೊಂದೆಡೆ ಡಿಕೆಶಿ ಅವರ ಪಾಲಿಗೆ ನಾಳೆ ನಿರ್ಣಾಯಕ ದಿನವಾಗಿದ್ದು, ಅವರಿಗೆ ಜಾಮೀನು ಸಿಗುತ್ತಾ ಅಥವಾ ಕಾನೂನು ಸಂಕಷ್ಟ ಮುಂದುವರೆಯುತ್ತಾ ಎಂಬುದನ್ನು ಕಾದು ನೋಡಬೇಕಿದೆ.

Leave a Comment