ಡಿಕೆಶಿ ಆಯ್ತು ಈಗ ಜಾರ್ಜ್ ವಿರುದ್ಧ ಇಡಿಗೆ ದೂರು

ಬೆಂಗಳೂರು: ಮಾಜಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿಕೃಷ್ಣಾ ರೆಡ್ಡಿ ಜಾರಿ ನಿರ್ದೇಶನಾಲಯ(ಇಡಿ)ಕ್ಕೆ ದೂರು ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು ಕೇರಳದಿಂದ ಕೊಡಗಿಗೆ ಬಂದು, ಸಣ್ಣ ಪುಟ್ಟ ಟಿಂಬರ್ ಕೆಲಸ ಮಾಡಿಕೊಂಡಿದ್ದವರು. ನಂತರ ರಾಜಕಾರಣ ಮಾಡಿಕೊಂಡು ಬೆಂಗಳೂರಿಗೆ ಬಂದು ಇಷ್ಟೆಲ್ಲ ಆಸ್ತಿ ಸಂಪಾದಿಸಿದ್ದಾರೆ. ಕೆ.ಜೆ.ಜಾರ್ಜ್, ಇದೀಗ ಸಾವಿರಾರು ಕೋಟಿ ರೂ.ಗಳ ಆಸ್ತಿಯ ಒಡೆಯ. ಅವರ ಮಗನ ಹೆಸರಿನಲ್ಲಿ ಹೆಸರಿನಲ್ಲಿ ಬೇನಾಮಿ ಆಸ್ತಿ ಇದೆ. ಮಗಳ ಹೆಸರಿನಲ್ಲಿ ಅಮೆರಿಕದಲ್ಲಿ ಆಸ್ತಿ ಇದೆ. ಲೋಕಾಯುಕ್ತಕ್ಕೆ ಆಸ್ತಿ ಘೋಷಣೆ ಮಾಡುವಾಗ ಸಲ್ಲಿಸಿರುವ ಅಫಿಡೆವಿಟ್‍ನಲ್ಲಿ ಆಸ್ಟ್ರೇಲಿಯಾದಲ್ಲಿ ಆಸ್ತಿ ಇದೆ ಎಂದು ನಮೂದಿಸಿದ್ದಾರೆ. ಆದರೆ, ಚುನಾವಣೆಗೆ ಸ್ಪರ್ಧಿಸುವಾಗ ಈ ಆಸ್ತಿಗಳನ್ನು ಘೋಷಿಸಿಲ್ಲ ಎಂದು ಹೇಳಿದ್ದಾರೆ. ಇನ್ನು ಸಿಂಗಪೂರಕ್ಕೆ ಹೋಗುವುದು ಕೇವಲ ಕ್ಯಾಸಿನೋ ಆಡಿ ಮಜಾ ಮಾಡುವುದಕ್ಕಲ್ಲ. ತಮ್ಮ ಆಸ್ತಿಗಳನ್ನು ನಿರ್ವಹಿಸಿಕೊಂಡು ಬರಲು ಹೋಗುತ್ತಾರೆ. ತಾವು ಸಂಪಾದಿಸಿರುವ ಹಣವನ್ನು ಹವಾಲಾ ಮೂಲಕ ವಿದೇಶಗಳಿಗೆ ಸಾಗಿಸುತ್ತಾರೆ ಅಂತ ಗಂಭೀರ ಆರೋಪ.

Leave a Comment