ಡಿಕೆಶಿ ಜೈಲು ಸೇರಲು ‘ಬಿಜೆಪಿ ಕಾರಣವಲ್ಲ’

ಚಿಕ್ಕಮಗಳೂರು.ಸೆ.19. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಜೈಲು ಸೇರಿದ್ದರಲ್ಲಿ ಬಿಜೆಪಿಯ ಕೈವಾಡವಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ.

ಇಂದು ಮೂಡಿಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಡಿಕೆಶಿ ಬಂಧನದ ಹಿಂದೆ ಬಿಜೆಪಿ ಕೈವಾಡವಿಲ್ಲ. ಕಾನೂನು ರೀತಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ ಎಂದರು. ಇನ್ನು ಕಾಂಗ್ರೆಸ್ ಡಿಕೆಶಿ ಬಂಧನದ ವಿಚಾರದಲ್ಲಿ ಬಿಜೆಪಿ ಇದೆ ಎಂದು ಹೇಳುತ್ತಿದೆ. ಈ ವಿಚಾರದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ. ಕಾಂಗ್ರೆಸ್ 60 ವರ್ಷ ಅಡಳಿತ ನಡೆಸಿದೆ. ಆಗ ಬಹಳಷ್ಟು ಜನ ಜೈಲಿಗೆ ಹೋಗಿದ್ದಾರೆ ಎಂದರು.

ಇನ್ನು ಕಾನೂನು ತನ್ನದೇ ಆದ ಕ್ರಮ ಕೈಗೊಂಡಿದ್ದು, ಇದಕ್ಕೆ ಬಿಜೆಪಿಗೆ ಥಳಕು ಹಾಕುವ ಕೆಲಸ ಮಾಡುವುದು ಸರಿಯಲ್ಲ. ನಿಮ್ಮ ತಪ್ಪನ್ನು ನಮ್ಮ ಮೇಲೆ ಹಾಕಬೇಡಿ ಎಂದು ಆರ್.ಅಶೋಕ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು…

Leave a Comment