ಡಿಕೆಶಿ ತಾಯಿ ,ಪತ್ನಿಗೆ ತಾತ್ಕಾಲಿಕ ರಿಲೀಫ್ : ಅ.24ಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ : 84 ವರ್ಷದ ಡಿಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಅವರಿಗೆ ಇಡಿ ಅಧಿಕಾರಿಗಳು ನೀಡಿದ್ದ ಸಮನ್ಸ್ ಗೆ ತಡೆಕೋರಿ, ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದ ಡಿಕೆಶಿ ತಾಯಿ ಹಾಗೂ ಪತ್ನಿಗೆ, ಇದೀಗ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಇಡಿ ಸಮನ್ಸ್ ಪ್ರಶ್ನಿಸಿದ್ದ ಅರ್ಜಿಯನ್ನು ಅಕ್ಟೋಬರ್ 24ಕ್ಕೆ ದೆಹಲಿ ಹೈಕೋರ್ಟ್ ಮುಂದೂಡಿದೆ.

ಮಾಜಿ ಸಚಿವ ಡಿಕೆ ಶಿವಕುಮಾರ್ ದೆಹಲಿಯ ನಿವಾಸದ ಮೇಲಿನ ಐಟಿ ದಾಳಿಯ ವಿಚಾರಣೆಗೆ ಸ್ಪಂದಿಸುತ್ತಿಲ್ಲ ಎನ್ನುವ ಕಾರಣಕ್ಕಾಗಿ ಇಡಿ ವಶದ ನಂತ್ರ, ನ್ಯಾಯಾಂಗ ಬಂಧನದ ಮೂಲಕ ತಿಹಾರ್ ಜೈಲು ಸೇರಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ತಾಯಿ ಹಾಗೂ ಅವರ ಪತ್ನಿಗೂ ಇಡಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿತ್ತು.

ಈಗಾಗಲೇ ಎರಡು ಬಾರಿ ಹಾಜರಾಗಿದ್ದ ಡಿಕೆ ಶಿವಕುಮಾರ್ ಅವರ ತಾಯಿ, ಮತ್ತೊಮ್ಮೆ ಇಡಿ ಅಧಿಕಾರಿಗಳು ಜಾರಿ ಮಾಡಿದ್ದ ಸಮನ್ಸ್ ಗೆ ತಡೆಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂತಹ ಪ್ರಕರಣದ ವಿಚಾರಣೆ ಆರಂಭವಾಗುತ್ತಿದ್ದಂತೆ, 84 ವರ್ಷದ ಡಿಕೆ ಶಿವಕುಮಾರ್ ಅವರ ತಾಯಿಗೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದನ್ನು ಪ್ರಶ್ನಿಸಿದರು. ಈ ವೇಳೆ ಇಡಿ ಪರ ವಕೀಲ, ಅಮಿತ್ ಮಹಾಜನ್, ಇಡಿ ನೀಡಿರುವ ಸಮನ್ಸ್ ಈಗ ಊರ್ಜಿತದಲ್ಲಿ ಇಲ್ಲ. ಹೀಗಾಗಿ ದೀಪಾವಳಿಯ ನಂತ್ರ ಈ ಅರ್ಜಿಯ ವಿಚಾರಣೆ ನಡೆಸುವಂತೆ ನ್ಯಾಯ ಪೀಠಕ್ಕೆ ಮನವಿ ಮಾಡಿಕೊಂಡಿದ್ದರು.

ಈ ಹಿನ್ನಲೆಯಲ್ಲಿ ದೆಹಲಿಯ ಹೈಕೋರ್ಟ್, ಡಿಕೆ ಶಿವಕುಮಾರ್ ಪತ್ನಿ ಹಾಗೂ ತಾಯಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 24ಕ್ಕೆ ಮುಂದೂಡಿದೆ. ಈ ಮೂಲಕ ತಾತ್ಕಾಲಿಕವಾಗಿ ಡಿಕೆ ಶಿವಕುಮಾರ್ ಅವರ ಪತ್ನಿ, 84 ವರ್ಷದ ತಾಯಿ ಗೌರಮ್ಮ ಅವರಿಗೆ ರಿಲೀಫ್ ನೀಡಿದೆ.

Leave a Comment