ಡಿ.4ಕ್ಕೆ ನೂತನ ಪಾಲಿಕೆ ಸದಸ್ಯರಿಗೆ ಸನ್ಮಾನ

ದಾವಣಗೆರೆ.ಡಿ.2; ದಕ್ಷಿಣ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರ ಪದಗ್ರಹಣ ಹಾಗೂ ನೂತನ ಮಹಾನಗರ ಪಾಲಿಕೆ ಸದಸ್ಯರಿಗೆ ಹಾಗೂ ಪರಾರ್ಜಿತ ಅಭ್ಯರ್ಥಿಗಳಿಗೆ ಸನ್ಮಾನ ಸಮಾರಂಭ ಮತ್ತು ಮತದಾರರ ಬಂಧುಗಳಿಗೆ, ಕಾರ್ಯಕರ್ತರಿಗೆ ಕೃತಜ್ಞತಾ ಸಮಾರಂಭವನ್ನು ಡಿ.4ರಂದು ಬೆಳಗ್ಗೆ 11ಕ್ಕೆ ನಗರದ ರೇಣುಕಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ಹೇಳಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಮಾರಂಭದ ಅಧ್ಯಕ್ಷತೆಯನ್ನು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಜಿ.ಎಂ.ಸಿದ್ದೇಶ್ವರ್, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಶಾಸಕರಾದ ಎಸ್.ಎ.ರವೀಂದ್ರನಾಥ್, ಮಾಡಾಳು ವಿರುಪಾಕ್ಷಪ್ಪ, ಪ್ರೊ.ಲಿಂಗಪ್ಪ, ಕರುಣಾಕರ ರೆಡ್ಡಿ, ಎಸ್.ವಿ.ರಾಮಚಂದ್ರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವರ್ ಭಾಗವಹಿಸಲಿದ್ದಾರೆ ಎಂದರು.
ದಕ್ಷಿಣ ವಿಧಾನಸಭಾ ಕ್ಷೇತ್ರದ 20 ವಾರ್ಡ್‍ನ 7 ವಾರ್ಡ್‍ನಲ್ಲಿ ವಿಜಯಶಾಲಿಯಾಗಿದ್ದೇವೆ. 17 ಜನ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ನಾಲ್ಕು ಜನರು ನಮಗೆ ಬೆಂಬಲಿಸಿದ್ದಾರೆ. ಜೆಡಿಎಸ್ ಮತ್ತು ಪಕ್ಷೇತರರಿಗೆ ಕಳೆದ ಮಹಾನಗರ ಪಾಲಿಕೆಯ ಆಡಳಿತ ವೈಫಲ್ಯತೆಗಳ ಬಗ್ಗೆ ತಿಳಿಸಿದ್ದೇವೆ. ಬಹುಮತ ಇದ್ದರೂ ಸಹ ಆಡಳಿತ ನೀಡುವಲ್ಲಿ ವಿಫಲರಾಗಿದ್ದಾರೆ ಎಂಬುದನ್ನು ತಿಳಿ ಹೇಳಿದ್ದೇವೆ. ಆದ್ದರಿಂದ ಬಿಜೆಪಿ ಪಕ್ಷಕ್ಕೆ ಜೆಡಿಎಸ್ ಮತ್ತು ಪಕ್ಷೇತರರ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸುವಂತೆ ಮನವರಿಕೆ ಮಾಡಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪಾಲಿಕೆ ಸದಸ್ಯ ಎಲ್.ಡಿ.ಗೋಣೆಪ್ಪ, ರಾಜನಹಳ್ಳಿ ಶಿವಕುಮಾರ್, ಶಾಂತಕುಮಾರ ಸೋಗಿ, ರಾಕೇಶ್ ಜಾಧವ್, ಗಾಯತ್ರಿ ಬಾಯಿ, ಗುರುರಾಜ್ ಸೋಗಿ, ಗೌತಮ್ ಜೈನ್, ಶ್ರೀನಿವಾಸ್, ಎಸ್.ಟಿ.ವೀರೇಶ್ ಇತರರು ಇದ್ದರು.

Leave a Comment