ಡ್ರಗ್ಸ್ ಹೊಂದಿದ್ದ ಆರೋಪದಲ್ಲಿ ಶ್ರೀಲಂಕಾ ಕ್ರಿಕೆಟ್ ತಾರೆ ಸೆರೆ

ಕೊಲಂಬೊ, ಮೇ 25 -ಹೆರಾಯಿನ್ ಹೊಂದಿದ್ದ ಆರೋಪದ ಮೇಲೆ ಶ್ರೀಲಂಕಾ ಪೊಲೀಸರು ಅಂತಾರಾಷ್ಟ್ರೀಯ ಕ್ರಿಕೆಟಿಗ ಶೆಹನ್ ಮಧುಶಂಕ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
2018 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಪಂದ್ಯದಲ್ಲಿಯೇ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದ 25 ವರ್ಷದ ಮಧುಶಂಕ ಅವರನ್ನು ಮ್ಯಾಜಿಸ್ಟ್ರೇಟ್ ಎರಡು ವಾರಗಳ ಕಾಲ ಬಂಧನಕ್ಕೆ ಒಪ್ಪಿಸಿದೆ.
ಭಾನುವಾರ ಪನ್ನಾಲ ಪಟ್ಟಣದಲ್ಲಿ ಬಂಧನಕ್ಕೊಳಗಾದಾಗ ಅವರು ಕೇವಲ ಎರಡು ಗ್ರಾಮ್ ಹೆರಾಯಿನ್ ಸಾಗಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಷ್ಟ್ರವ್ಯಾಪಿ ಕೊರೊನಾ ವೈರಸ್ ಕರ್ಫ್ಯೂ ಸಂದರ್ಭದಲ್ಲಿ ಕಾರಿನಲ್ಲಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಪ್ರಯಾಣಿಸುತ್ತಿದ್ದಾಗ ಮಧುಶಂಕ ಅವರನ್ನು ತಡೆದು ಪರಿಶೀಲಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಬಲಗೈ ವೇಗದ ಬೌಲರ್, 2018 ರ ಜನವರಿಯಲ್ಲಿ ತಮ್ಮ ಏಕದಿನ ಅಂತಾರಾಷ್ಟ್ರೀಯ ಚೊಚ್ಚಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ್ದರು

Share

Leave a Comment