ತಪ್ಪು ಮಾಡಬೇಡಿ ದರ್ಶನ್ ಮನವಿ

ಬೆಂಗಳೂರು, ಮಾ ೨೪- ಕೊರೊನಾ ವೈರಸ್ ವಿಚಾರದಲ್ಲಿ ಇಟಲಿ, ಸ್ಪೇನ್ ಮಾಡಿದ್ದ ತಪ್ಪುನ್ನು ನಾವು ಮಾಡುವುದು ಬೇಡ ಎಂದು ನಟ ದರ್ಶನ್ ಎಚ್ಚರಿಕೆ ಸಂದೇಶ ನೀಡಿದ್ದಾರೆ.

ಈ ಕುರಿತು ಫೇಸ್‌ಬುಕ್ ನಲ್ಲಿ ಬರೆದುಕೊಂಡಿರುವ ದರ್ಶನ್ ಅವರು ಮನೆಯಿಂದ ಹೊರಬಂದು ತಪ್ಪು ಮಾಡಬೇಡಿ ಎಂದು ಹಾಗೂ ಕೊರೊನಾ ಹರಡುವುದನ್ನು ತಡೆಯುವಂತೆ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಎಲ್ಲಾ ಭಾರತೀಯರಲ್ಲೂ ನನ್ನ ಕಳಕಳಿಯ ವಿನಂತಿ. ಈ ಮಾರಕವಾದ ಕೊರೊನ ವೈರಸ್‌ನಿಂದ ಪಾರಾಗುವುದು ನಮ್ಮ ಮೊದಲ ಆದ್ಯತೆ ಆಗಿರಬೇಕು. ಈ ವೈರಸ್ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಸರಕಾರ, ವೈದ್ಯರು, ಪೊಲೀಸ್ ಸಿಬ್ಬಂದಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ದಯಮಾಡಿ ನಿಮ್ಮ ಕುಟುಂಬಕ್ಕಾಗಿ ನಿಮ್ಮ ನೆರೆಹೊರೆಯ ಗೆಳೆಯರಿಗಾಗಿ, ನಮಗಾಗಿ ಆದಷ್ಟು ನಿಮ್ಮ ಮನೆಯಲ್ಲಿ ಸುರಕ್ಷಿತವಾಗಿರಿ. ಈ ಸೋಂಕು ರೋಗ ಬಹಳ ಅಪಾಯಕಾರಿ ಎಂಬುದು ನಿಮಗೆ ತಿಳಿದರೂ ಸಹ ತಮ್ಮ ಊರುಗಳಿಗೆ ಹೋಗುವುದು, ಹಬ್ಬಕ್ಕಾಗಿ ಸಂಚರಿಸುವುದು ಮಾಡದಿರಿ.

ನಿಮ್ಮ ಈ ಕೃತ್ಯದಿಂದ ಇಡೀ ದೇಶವೇ ಮಾರಣಹೋಮಕ್ಕೆ ತುತ್ತಾಗುವಂತೆ ಮಾಡದಿರಿ. ಇಟಲಿ ಸ್ಪೇನ್ ದೇಶಗಳಲ್ಲಿ ಜಾಗೃತಕ್ರಮಗಳನ್ನು ಮೊದಲೇ ಸರಿಯಾಗಿ ಪಾಲಿಸದೆ ಆಗುತ್ತಿರುವ ಅನಾಹುತಗಳು ನಿಮ್ಮ ಕಣ್ಣ ಮುಂದಿವೆ. ನಿಮ್ಮ ಕರ್ತವ್ಯ ಮನೆಯಲ್ಲಿಯೇ ಇದ್ದು ದೇಶದ ಹಿತಕ್ಕಾಗಿ ಎಲ್ಲಾ ನಿಯಮಗಳನ್ನು ಪಾಲಿಸುವುದು. ಇದನ್ನು ದಯಮಾಡಿ ನೆರವೇರಿಸಿಕೊಡಿ..’Common sense is not common’  ಎನ್ನುವ ಹಾಗೆ ಮಾಡಬೇಡಿ ಎಂದು ದರ್ಶನ್ ಅವರು ಮನವಿ ಮಾಡಿದ್ದಾರೆ.

Leave a Comment