ತಾಲೂಕು ಅಧ್ಯಕ್ಷ ಸ್ಥಾನಕ್ಕೆ ಮೇಟಿ ರಾಜೀನಾಮೆ

ಲಿಂಗಸೂಗೂರು.ಸೆ.08- ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣಪ್ಪ ಮೇಟಿಯವರು ತಾಲೂಕು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಅವರಿಂದು ಸುದ್ದಿಗಾರರೊಂದಿಗೆ ಮಾತನಾಡಿ, ತಮ್ಮ ರಾಜೀನಾಮೆ ಪತ್ರವನ್ನು ಜಿಲ್ಲಾಧ್ಯಕ್ಷ ರಾಮಣ್ಣ ಇರಬಗೇರಾ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಇ-ಮೇಲ್ ಮುಖಾಂತರ ಸಲ್ಲಿಸಿದ್ದಾರೆ. ಸಂಸದ ಬಿ.ವಿ.ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೊಸರಾಜು ಅವರ ಒತ್ತಾಯದ ಮೇರೆಗೆ ಕಳೆದ ವಿಧಾನಸಭಾ ಚುನಾವಣೆ ನಿಮಿತ್ಯ ಮಾರ್ಚ್‌ 13 ರಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು, ಪಕ್ಷ ನನಗೆ ವಹಿಸಿದ್ದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ.
ಅಲ್ಲದೇ, ಲಿಂಗಸೂಗೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಲಾಗಿದೆ. ಮುಂಬರುವ ದಿನಗಳಲ್ಲಿ ಪಕ್ಷ ಬಯಸಿದ್ದಲ್ಲಿ ಜಿಲ್ಲಾಧ್ಯಕ್ಷ ಸ್ಥಾನ ನಿರ್ವಹಿಸುವುದಾಗಿ ತಿಳಿಸಿದರು.

Leave a Comment