ತಾ.ಪಂ. ತ್ರೈಮಾಸಿಕ ಕೆಡಿಪಿ ಸಭೆ

 ಶಾಸಕರಿಂದ ಅಧಿಕಾರಿಗಳಿಗೆ ತರಾಟೆ
ಮಾನ್ವಿ.ಮಾ.20- ಕೃಷಿ ಇಲಾಖೆಯಲ್ಲಿ ಸಲಕರಣೆ ವಿತರಣೆಯಲ್ಲಿನ ಲೋಪದೋಷ ಸರಿಪಡಿಸಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ವಿತರಿಸುವಂತೆ ಕೃಷಿ ಇಲಾಖೆಯ ಅಧಿಕಾರಿಗಳನ್ನು ಕಾಡಾಧ್ಯಕ್ಷ ಹಾಗೂ ಶಾಸಕರಾದ ಜಿ.ಹಂಪಯ್ಯ ಸಾಹುಕಾರ ತೀವ್ರ ತರಾಟೆಗೆ ತೆಗೆದುಕೊಂಡರು.
ಇಂದು ತಾ.ಪಂ. ಸಭಾಂಗಣದಲ್ಲಿ ತಾಲೂಕು ಪಂಚಾಯತಿ ತ್ರೈಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೃಷಿ ಇಲಾಖೆ ವತಿಯಿಂದ ರೈತರಿಗೆ ಮಂಜೂರಾದ ಸೌಲಭ್ಯಗಳನ್ನು ಸಮರ್ಪಕವಾಗಿ ವಿತರಿಸುವಲ್ಲಿ ನಿರ್ಲಕ್ಷೆ ಧೋರಣೆ ಅನುಸರಿಸಿದ ಅಧಿಕಾರಿಗಳನ್ನು ಶಾಸಕರು ತರಾಟೆಗೆ ತೆಗೆದುಕೊಂಡು ಶೀಘ್ರ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ವಿತರಿಸಬೇಕೆಂದು ತಾಕೀತು ಮಾಡಿದರು.

ತಾಲೂಕಿನಾದ್ಯಂತ ಭೀಕರ ಬರ ಆವರಿಸಿರುವ ಹಿನ್ನೆಲೆ ಕುಡಿವ ನೀರಿನ ಸಮಸ್ಯೆ ನಿವಾರಣೆಗೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಅಧಿಕಾರಿಗಳು ಕಾಲಹರಣ ಮಾಡದೆ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಕಾರ್ಯ ಮಾಡಬೇಕೆಂದು ತಿಳಿಸಿದರು.

ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಮಹಾಂತೇಶ ಪಾಟೀಲ್ ಅತ್ತನೂರು ಮಾತನಾಡಿ, ತಾಲೂಕಿನಾದ್ಯಂತ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಯಕರ್ತರಿಗೆ ಅನಗತ್ಯವಾಗಿ ಕಿರುಕುಳ ನೀಡುತ್ತಿರುವ ಶಿಶು ಅಭಿವೃದ್ಧಿ ಅಧಿಕಾರಿಯಾದ ಖಾಜಿಯವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ತಾ.ಪಂ.ಅಧ್ಯಕ್ಷೆ ಶರಣಮ್ಮ ಮುದ್ದಿಗೌಡ, ಉಪಾಧ್ಯಕ್ಷ ಮಲ್ಲನಗೌಡ, ತಾ.ಪಂ.ಇಓ ಶರಣಬಸವ, ಅಧಿಕಾರಿಗಳಾದ ಸೈಯದ್ ಖಾಜಾ, ಚಂದ್ರಶೇಖರ್, ಗಿರಿಯಪ್ಪ, ಭೀಮಣ್ಣ ಸೇರಿ ಇತರರು ಉಪಸ್ಥಿತರಿದ್ದರು.

Leave a Comment