ತಾ.ಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಕೆ.ಆರ್.ಪೇಟೆ,ಆ.14- ತಾಲೂಕು ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಬಳ್ಳೇಕೆರೆ ಕ್ಷೇತ್ರದ ಹೆಚ್.ಎಸ್.ರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದಿನ ಅಧ್ಯಕ್ಷರಾದ ಎಂ.ಎನ್.ವಿಜಯಕುಮಾರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಹೆಚ್.ಎಸ್.ರಾಜು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎನ್.ಚಂದ್ರಮೌಳಿ ತಿಳಿಸಿದರು.
ಸ್ಥಾಯಿ ಸಮಿತಿ ನೂತನ ಅಧ್ಯಕ್ಷ ಹೆಚ್.ಎಸ್.ರಾಜು ಅವರನ್ನು ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್.ಟಿ.ಮಂಜು, ತಾಲೂಕು ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮೀಸ್ವಾಮಿನಾಯಕ್, ಉಪಾಧ್ಯಕ್ಷ ಜಾನಕೀರಾಂ, ಪುರಸಭೆಯ ಮಾಜಿ ಅಧ್ಯಕ್ಷ ಕೆ.ಟಿ.ಗಂಗಾಧರ್, ತಾಲೂಕು ಯುವ ಜೆಡಿಎಸ್ ಅಧ್ಯಕ್ಷ ಕೆ.ಆರ್.ಹೇಮಂತ್‍ಕುಮಾರ್, ಉಪಾಧ್ಯಕ್ಷ ಹನುಮಂತು, ಶಾಸಕರ ಆಪ್ತ ಕಾರ್ಯದರ್ಶಿ ದಯಾನಂದ್, ಜಿಲ್ಲಾ ಯುವ ಜೆಡಿಎಸ್ ಉಪಾಧ್ಯಕ್ಷ ಶ್ರೀಧರ್ ಸಿರಿವಂತ, ಪುರಸಭಾ ಸದಸ್ಯರಾದ ಸಂತೋಷ್, ದಿನೇಶ್, ನಾಗರಾಜು, ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯ ಕೆ.ಆರ್.ನೀಲಕಂಠ, ಮುಖಂಡರಾದ ವಿ.ಎನ್.ಮಹದೇವೇಗೌಡ, ಇಂಜಿನಿಯರ್ ಸತೀಶ್, ಕೆ.ಎಸ್.ಹರಪ್ರಸಾದ್, ಪ್ರಮೋದ್ ಮತ್ತಿತರರು ಅಭಿನಂದಿಸಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ರಾಜು ಅವರು ನನಗೆ ದೊರಕಿಸಿ ಕೊಡಲು ಕಾರಣ ಕರ್ತರಾದ ಶಾಸಕ ಕೆ.ಸಿ.ನಾರಾಯಣಗೌಡ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು, ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್.ಟಿ.ಮಂಜು ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ ಅವರು ನನಗೆ ಸಿಕ್ಕಿರುವ ಅಧಿಕಾರವನ್ನು ಸದುಪಯೋಗ ಪಡಿಸಿಕೊಂಡು ನನ್ನ ಅಧಿಕಾರ ವ್ಯಾಪ್ತಿಯಲ್ಲಿ ಉತ್ತಮ ಕೆಲಸಗಳನ್ನು ಮಾಡಿ ಅಧ್ಯಕ್ಷ ಸ್ಥಾನಕ್ಕೆ ಒಳ್ಳೆಯ ಹೆಸರು ತರಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.

Leave a Comment