ತಿರುಪತಿ ತಿಮ್ಮಪ್ಪನ ಆಸ್ತಿಗಳ ಮಾರಾಟಕ್ಕೆ ಸಿದ್ಧವಾಗುತ್ತಿರುವ ಟಿಟಿಡಿ

ತಿರುಪತಿ, ಮೇ23- ತಿರುಮಲ -ತಿರುಪತಿ ದೇವಸ್ಥಾನ ಮಂಡಳಿ ಸಂಚಲನ ನಿರ್ಣಯ ಕೈಗೊಂಡಿದೆ. ತಮಿಳುನಾಡಿನ ೨೩ ಸ್ಥಳಗಳಲ್ಲಿರುವ ತಿರುಪತಿ ತಿಮ್ಮಪ್ಪನ ಆಸ್ತಿಗಳನ್ನು ವಿಕ್ರಯ ನಡೆಸಲು ವೇದಿಕೆ ಸಿದ್ದಗೊಳ್ಳುತ್ತಿದೆ.
ಸ್ಥಿರಾಸ್ತಿಗಳನ್ನು ವಿಕ್ರಯಗೊಳಿಸಲು ಟಿಟಿಡಿ ಆಡಳಿತ ಮಂಡಳಿಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.
ವಿಕ್ರಯ ಪ್ರಕ್ರಿಯೆ ನಡೆಸಲು ೮ ಸಮಿತಿಗಳನ್ನು ರಚಿಸಲಾಗಿದ್ದು, ಆಸ್ತಿಗಳನ್ನು ಬಹಿರಂಗ ಹರಾಜು ಮೂಲಕ ವಿಕ್ರಯ ನಡೆಸಲು ನಿರ್ಧರಿಸಲಾಗಿದೆ.
ಈ ಪ್ರಕ್ರಿಯೆಯ ಭಾಗವಾಗಿ, ಆಸ್ತಿಗಳನ್ನು ನೋಂದಣಿ ಮಾಡುವ ಅಧಿಕಾರವನ್ನು ಟಿಟಿಡಿ ಅಧಿಕಾರಿಗಳಿಗೆ ನೀಡಲಾಗಿದೆ. ಟಿಟಿಡಿ ಸ್ವತ್ತುಗಳನ್ನು ತಮಗೆ ಬೇಕಾದವರಿಗೆ ನೀಡಲು ಸರ್ಕಾರ ಪ್ರಯತ್ನ ನಡೆಸುತ್ತಿದೆ ಎಂಬ ಟೀಕೆಗಳು ಕೇಳಿ ಬರುತ್ತಿವೆ. ಕೂಡಲೇ ತಿರುಪತಿ ತಿಮ್ಮಪ್ಪನ ಆಸ್ತಿಗಳ ವಿಕ್ರಯ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ,
ತಿರುಪತಿ ತಿಮ್ಮಪ್ಪನಿಗೆ ಭಕ್ತರು ನೀಡಿದ ಆಸ್ತಿಗಳನ್ನು ನಿರರ್ಥಕ ಎಂದು ಟಿಟಿಡಿ ಹೇಳುತ್ತಿರುವುದು ಅತ್ಯಂತ ನೋವಿನ ವಿಷಯ ಎಂದು ಟಿಡಿಪಿ ನಾಯಕ ಓವಿ ರಮಣ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ
ಈ ಸ್ಥಳಗಳಲ್ಲಿ ಹಿಂದೂ ಧರ್ಮ ಪ್ರಚಾರ ನಡೆಯಬೇಕು ಎಂದು ಹೇಳಿದ್ದಾರೆ. ಟಿಟಿಡಿ ಆಸ್ತಿಗಳ ಮಾರಾಟ ಕುರಿತು ಜನಸೇನಾ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯಕ್ಕಾಗಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಆಡಳಿತದಲ್ಲಿ ರಾಜ್ಯದಲ್ಲಿ ದೇವರಿಗೆ, ದೇವರ ಆಸ್ತಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ದೂರಿದ್ದಾರೆ. ಟಿಟಿಡಿ ಆಸ್ತಿಗಳ ಸಂರಕ್ಷಣೆಗೆ ಹೊರಾಟ ನಡೆಸಲಾಗುವುದು, ತಿರುಪತಿಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಭಕ್ತರ ಮುಂದಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಹೇಳಿದ್ದಾರೆ.

Leave a Comment