ತಿವಾರಿ ಸಾವು ಸಿಬಿಐ ತನಿಖೆಗೆ ಬಿಎಸ್‌ವೈ ಆಗ್ರಹ

ಚಿತ್ರದುರ್ಗ, ಮೇ. ೧೯- ಉತ್ತರ ಪ್ರದೇಶದಲ್ಲಿ ನಿಗೂಢವಾಗಿ ಮೃತಪಟ್ಟಿರುವ ರಾಜ್ಯದ ಆಹಾರ ಇಲಾಖೆ ಆಯುಕ್ತ ಅನುರಾಗ್ ತಿವಾರಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ. ರಾಜ್ಯಸರ್ಕಾರ ವಿಳಂಬ ಮಾಡಿದರೆ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರವರು ಸಿಬಿಐಗೆ ವಹಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

ಕೊಲೆ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಬಿಐ ತನಿಖೆಗೆ ವಹಿಸಬೇಕು, ಇಲ್ಲವಾದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿಆದಿತ್ಯನಾಥ ಅವರು ಈ ಪ್ರಕರಣವನ್ನು ಸಿಬಿಐಗೆ ವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಎಚ್ಚರಿಸಿದ್ದಾರೆ. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಿವಾರಿಯವರ ಕೊಲೆ ಪ್ರಕರಣ ಹಲವಾರು ಅನುಮಾನಗಳಿಗೆ ಎಡೆಮಾಡಿದೆ ಆದ್ದರಿಂದ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಆಗ ಮಾತ್ರ ಸತ್ಯ ತಿಳಿಯಲು ಸಾಧ್ಯ ಎಂದು ಹೇಳಿದರು.

ಅಲ್ಲದೇ ನಾನು ಸಹ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸುದೀರ್ಘ ಪತ್ರ ಬರೆದು ಸಿಬಿಐಗೆ ವಹಿಸುವಂತೆ ಕೋರಿದ್ದೇನೆ ಎಂದು ಹೇಳಿದರು.
ಮಿಷನ್ 150 ಯಶಸ್ವಿಗೊಳಿಸುವ ಉದ್ದೇಶದಿಂದ ಅಭ್ಯರ್ಥಿಗಳ ಆಯ್ಕೆ ಕುರಿತು ಆಗಸ್ಟ್ 3 ರಿಂದ ಮೂರುದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಬೆಂಗಳೂರಿಗೆ ಬರಲಿದ್ದಾರೆ ಆಗ ಅಭ್ಯರ್ಥಿಗಳ ಪಟ್ಟಿಯನ್ನು ಅಮಿತ್ ಷಾ ಮುಂದೆ ಇಡುತ್ತೇವೆ ಉತ್ತರ ಪ್ರದೇಶ ಮಾದರಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಲಿದೆ. ಅಮಿತ್ ಷಾ ಅಥವಾ ಬಿಎಸ್‍ವೈ ಮನೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯುವುದಿಲ್ಲ ಜನರ ಅಭಿಪ್ರಾಯದಂತೆ ಆಯ್ಕೆ ಮಾಡಲಾಗುವುದು ಎಂದರು.

ರಾಜ್ಯ ಪ್ರವಾಸ ಕೈಗೊಂಡಿರುವ ನಾವು ದಲಿತ ಕೇರಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಲಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೋದಲೆಲ್ಲಾ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು, ಜನರಲ್ಲಿ ಗೊಂದಲ ಉಂಟುಮಾಡಬಾರದು, ಆಸೆ ಹುಟ್ಟಿಸಬಾರದು ಬಹುದೊಡ್ಡ ಕಾಮಗಾರಿಯಾಗಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಬಿಜೆಪಿ ಸರ್ಕಾರವಿದ್ದಾಗ 12 ಸಾವಿರ ಕೋಟಿ ರೂ ನಿಗಧಿಮಾಡಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಕೇವಲ 10 ಸಾವಿ ಕೋಟಿ ರೂ ನಿಗಧಿ ಮಾಡಿದೆ ಇದರಲ್ಲಿ 500 ಕೋಟಿ ರೂಗಳನ್ನು ಬಿಜೆಪಿ ಸರ್ಕಾರ ಬಿಡುಗಡೆ ಮಾಡಿತ್ತು. ಆದರೆ ಇಂದಿನ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನು ಬೇರೆ ಕಾಮಗಾರಿಗಳಿಗೆ ಉಪಯೋಗಿಸಿಕೊಂಡು ಭದ್ರಾ ಮೇಲ್ದಂಡೆ ಕಾಮಗಾರಿಯನ್ನು ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದರು.

ದಾವಣಗೆರೆ ಸಂಸದ ಜಿ.ಎಂ ಸಿದ್ದೇಶ್ವರ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆದಿರುವುದು ಸ್ವಾಗತಾರ್ಹ. ಕೇಂದ್ರ ಸರ್ಕಾರ ಯಾವುದೇ ಪಕ್ಷಪಾತ ಮಾಡದೆ ನಿಸ್ಪಕ್ಷಪಾತವಾಗಿದೆ ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ, ಗೋವಿಂದ ಕಾರಜೋಳ,ಕೆ.ಎಸ್ ನವೀನ್, ನರೇಂದ್ರ, ಸಿದ್ದೇಶ್ ಯಾದವ್, ತಿಪ್ಪೇಸ್ವಾಮಿ ಇತರರಿದ್ದರು.

Leave a Comment