ತೀವ್ರ ರಕ್ತಸ್ರಾವದಿಂದ ಮಹಿಳೆ ಮೃತ್ಯು

ಉಡುಪಿ, ಫೆ.೧೦- ಬಟ್ಟೆ ತೊಳೆಯಲು ಮನೆ ಸಮೀಪದ ತೋಡಿಗೆ ಹೋಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತಸ್ರಾವದಿಂದ ನಿತ್ರಾಣಗೊಂಡು ನೀರಿನ ತೋಡಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ಬಳಿ ನಡೆದಿದೆ.
ಮೃತರನ್ನು ಸುಶೀಲಾ(೩೪) ಎಂದು ಗುರುತಿಸಲಾಗಿದೆ. ಗರ್ಭಪಾತಕ್ಕೆ ಒಳಗಾಗಿದ್ದ ಇವರು, ಮನೆ ಸಮೀಪದ ಬಟ್ಟೆ ತೊಳೆಯಲು ಮತ್ತು ಸ್ನಾನ ಮಾಡಲೆಂದು ತೆರಳಿದ್ದರು. ಅಲ್ಲಿ ರಕ್ತಸ್ರಾವವಾಗಿ ನಿತ್ರಾಣಗೊಂಡು ತೋಡಿಗೆ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment