ತೆಲಂಗಾಣದಲ್ಲಿ ಬಸ್ ಉರುಳಿ 20 ಸಾವು

ಹೈದರಾಬಾದ್, ಸೆ. ೧೧- ತೆಲಂಗಾಣ ರಾಜ್ಯ ಸಾರಿಗೆ ಬಸ್ಸೊಂದು ಕಣಿವೆಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 20 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಜಗತಿಯಾಳ್ ಜಿಲ್ಲೆಯಲ್ಲಿ ಸಂಭವಿಸಿದೆ. ಇತರೆ 20 ಮಂದಿ ಗಾಯಗೊಂಡಿದ್ದಾರೆ.
ಕೊಂಡಗಟ್ಟುವಿನಿಂದ ಜಗತಿಯಾಳ್ ಗೆ ತೆರಳುತ್ತಿದ್ದ ಬಸ್ಸು ಶನಿವಾರ ಪೇಟೆ ಬಳಿಯ ಘಟ್ಟ ಪ್ರದೇಶದ ತಿರುವಿನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಟ 20 ಜನ ಅಸು ನೀಗಿದ್ದಾರೆ. ಅಪಘಾತಕ್ಕೀಡಾದ ಸಂದರ್ಭದಲ್ಲಿ ಬಸ್ಸಿನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರೆನ್ನಲಾಗಿದೆ.
ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಗಾಯಗೊಂಡಿರುವವರನ್ನು ವಿವಿಧ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಜಗತಿಯಾಳ್ ಜಿಲ್ಲಾಧಿಕಾರಿ ಎ.ಶರತ್ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ.

Leave a Comment