ತೋಟದ ಶೆಡ್‌ಗೆ ಬೆಂಕಿ: ಟ್ರ್ಯಾಕ್ಟರ್ ಭಸ್ಮ

ಗುಬ್ಬಿ, ಆ. ೧- ತೋಟದಲ್ಲಿದ್ದ ಶೆಡ್‌ಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಶೆಡ್‌ನಲ್ಲಿದ್ದ ಟ್ರ್ಯಾಕ್ಟರ್ ಸಂಪೂರ್ಣ ಭಸ್ಮವಾಗಿರುವ ಘಟನೆ ತಾಲ್ಲೂಕಿನ ಕಡೇಪಾಳ್ಯ ಗ್ರಾಮದಲ್ಲಿ ನಡೆದಿದೆ.

ಕಡೇಪಾಳ್ಯ ಗ್ರಾಮದ ರೈತ ಶ್ರೀನಿವಾಸ್ ಎಂಬುವರ ತೋಟದಲ್ಲಿದ್ದ ಶೆಡ್‌ಗೆ ಬೆಂಕಿ ತಗುಲಿ ಟ್ರ್ಯಾಕ್ಟರ್ ಹೊತ್ತಿ ಉರಿಯುತ್ತಿರುವುದನ್ನು ಗಮನಿಸಿದ ತೋಟದ ಅಕ್ಕಪಕ್ಕದ ಮನೆಯವರು ತಕ್ಷಣ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರಾದರೂ

ಅಷ್ಟರಲ್ಲಿ ಟ್ರ್ಯಾಕ್ಟರ್, 5000 ಸಾವಿರ ಕೊಬ್ಬರಿ, ಕೇಬಲ್ ಹಾಗೂ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಕರಕಲಾಗಿದ್ದವು. ಇದರಿಂದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ರೈತ ಶ್ರೀನಿವಾಸ್ ತಿಳಿಸಿದ್ದಾರೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾ.ಪಂ. ಸದಸ್ಯ ಸೋಮಶೇಖರ್ ಅವರಿಗೆ ತಿಳಿಸಿದ್ದಾರೆ.

ಈ ಸಂಬಂಧ ಗುಬ್ಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Comment