ತ್ರಿವಳಿ ತಲಾಖ್; ಪ್ರಕರಣ ದಾಖಲು

ಅಯೋಧ್ಯ, ಆ. ೨೪-ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆ ಉತ್ತರಪ್ರದೇಶ ಅಯೋಧ್ಯೆಯಲ್ಲಿ ನಡೆದಿದೆ.
ಆ.೧೮ರಂದು ಎರಡನೇ ಬಾರಿಯೂ ಹೆಣ್ಣುಮಗುವಿಗೆ ಜನ್ಮ ನೀಡಿದ ನಂತರ ತ್ರಿವಳಿ ತಲಾಖ್ ನೀಡಿದ್ದಾನೆ ಎಂದು ಪತ್ನಿ ಜಫ್ರಿನ್ ಅಂಜುಮ್ ಪೊಲೀಸರಿಗೆ ದೂರು ನೀಡಿದ್ದರು. ನನ್ನ ತಂದೆ ವರದಕ್ಷಿಣೆ ಹಣ ನೀಡಿಲ್ಲ ಎಂದು ಆರೋಪಿಸಿ ನನಗೆ ಪತಿ ಕಿರುಕುಳ ನೀಡುತ್ತಿದ್ದರು ಎಂದು ೨೩ ವರ್ಷದ ಮಹಿಳೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ವಿವಾಹವಾಗಿ ಒಂದು ತಿಂಗಳು ಪೂರ್ಣಗೊಳ್ಳುತ್ತಿದ್ದಂತೆ ತನ್ನ ಪತಿ ವರದಕ್ಷಿಣೆ ಹಣಕ್ಕಾಗಿ ಕಿರುಕುಳ ನೀಡಲು ಆರಂಭಿಸಿದರು. ನಾನು ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ನನಗೆ ತ್ರಿವಳಿ ತಲಾಖ್ ನೀಡಿದ್ದಾರೆ. ನನಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.
ನವೆಂಬರ್ ೨೦೧೮ರಲ್ಲಿ ಮಹಾರಾe ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ನಕತ್‌ವಾರಾ ಗ್ರಾಮದ ಅಸ್ತಿಕರ್ ಅಹ್ಮದ್‌ನನ್ನು ವಿವಾಹವಾಗಿದ್ದರು. ಪತ್ನಿ ದೂರು ನೀಡಿದ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮಾಂತರ ಎಸ್ಪಿ ಶೈಲೇಂದ್ರಕುಮಾರ್ ತಿಳಿಸಿದ್ದಾರೆ.

Leave a Comment