ಥಳಿತ ಪ್ರಕರಣ ದೂರು ದಾಖಲು

ಮುಂಡಗೋಡ,ಮಾ.14- ಪಟ್ಟಣದಲ್ಲಿ ಸೋಮವಾರ ಸಂಜೆ  ಇಲ್ಲಿನ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಥಳಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನ ಮೇಲೆ ಹಲ್ಲೆ ಮಾಡಿದ ವ್ಯಕ್ತಿಗಳ ಮೇಲೆ ಮಂಗಳವಾರ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಆರೋಪಿ ಪ್ರಕಾಶ ಪ್ರತಿ ದೂರು ಸಲ್ಲಿಸಿದ್ದಾನೆ.
ಬಂಧನಕ್ಕೊಳಗಾದ ವ್ಯಕ್ತಿ ಪ್ರಕಾಶ ಅಜ್ಜಮ್ಮನವರನನ್ನು ಇಲ್ಲಿನ ಪೊಲೀಸರು ಮಂಗಳವಾರ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

Leave a Comment