ದಲಿತ ನೌಕರರ ಬಡ್ತಿ ಸೆ. 19 ವಿಚಾರಣೆ ಮುಂದೂಡಿಕೆ

ನವದೆಹಲಿ, ಸೆ. ೧೨- ಪರಿಶಿಷ್ಟ ಜಾತಿ, ಪಂಗಡದ ಸರ್ಕಾರಿ ನೌಕರರ ಬಡ್ತಿ ಮೀಸಲಾತಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮತ್ತೆ ಇದೇ 19ಕ್ಕೆ ಮುಂದೂಡಿದೆ.

ನ್ಯಾಯಮೂರ್ತಿ ಉದಯ್ ಲಲಿತ್ ಪೀಠ ಈ ಸಂಬಂಧ ವಿಚಾರಣೆ ನಡೆಸುತ್ತಿದ್ದು, ಉದಯ್ ಲಲಿತ್ ಬದಲಾದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಎ.ಎಂ. ಸಪ್ರೆ ನ್ಯಾಯಪೀಠಕ್ಕೆ ಪ್ರಕರಣ ವರ್ಗವಾಗಿದೆ.

ಈ ಕುರಿತು ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಎ.ಎಂ. ಸಪ್ರೆ ನೇತೃತ್ವದ ನ್ಯಾಯಪೀಠ ಪ್ರಕರಣದ ಮುಂದಿನ ವಿಚಾರಣೆಯನ್ನು ಸೆ. 19ಕ್ಕೆ ಮುಂದೂಡಿದೆ.

ಪರಿಶಿಷ್ಟ ಜಾತಿ, ಪಂಗಡದ ಸರ್ಕಾರಿ ನೌಕರರಿಗೆ ಬಡ್ತಿ ಮೀಸಲಾತಿ ಸಂಬಂಧ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ, ರಾಷ್ಟ್ರಪತಿಗಳಿಂದ ಅಂಕಿತವಾಗಿರುವ ಹಿನ್ನೆಲೆಯಲ್ಲಿ ಸರ್ಕಾರದ ನಡೆಯನ್ನು ಪ್ರಶ್ನಿಸಿ, ಬಿ.ಕೆ. ಪವಿತ್ರ ಸೇರಿದಂತೆ, ಹಲವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಪ್ರಕರಣ ಸಂಬಂಧ ನ್ಯಾಯಮೂರ್ತಿ ಉದಯ್ ಲಲಿತ್ ಪೀಠ ವಿಚಾರಣೆ ನಡೆಸುತ್ತಿತ್ತು. ಹೀಗೆ ನ್ಯಾಯಪೀಠ ಬದಲಾಗಿರುವುದರಿಂದ ವಿಚಾರಣೆಯನ್ನು ಮುಂದೂಡಲಾಗಿದೆ.

Leave a Comment