ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ : ಕ್ರಮಕ್ಕೆ ಸಿಎಂ ಸೂಚನೆ

ಮೈಸೂರು, ಜೂ 12- ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕಪ್ಪೇಕಟ್ಟೆ ಗ್ರಾಮದಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ ಮಾಡಿರುವ ಘಟನೆ ಅಮಾನವೀಯ ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಸಮಾಜದಲ್ಲಿ ಜಾತಿ ವೈಷಮ್ಯ ಇನ್ನೂ ಮುಂದುವರೆದಿರುವುದು ದುರದುಷ್ಟಕರ ಇಂತಹ ಕೃತ್ಯಗಳನ್ನು ಒಕ್ಕೊರಲಿನಿಂದ ಎಲ್ಲರೂ ವಿರೋಧಿಸಬೇಕು ಎಂದು ಅವರು ಟ್ವೀಟ್ ನಲ್ಲಿ ಹೇಳಿದ್ದಾರೆ.
ಜೂನ್ 3 ರಂದು ದಲಿತ ವ್ಯಕ್ತಿಯವನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿರುವ ಪ್ರಕರಣ ತಡ‌ವಾಗಿ ಬೆಳಕಿಗೆ ಬಂದಿದ್ದು ಘಟನೆ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದು ನಾಲ್ವರು ತಲೆ ಮರೆಸಿಕೊಂಡಿದ್ದಾರೆ. ಅವರಿಗಾಗಿ ಪೊಲೀಸರು ಶೋಧ ಮುಂದುವರೆಸಿದ್ದಾರೆ.
ಪ್ರತಾಪ್ ಎಂಬಾತನನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಲಾಗಿದೆ. ಆದರೆ ಈತ ಮಾನಸಿಕ ಅಸ್ವಸ್ಥನಾಗಿದ್ದಾನೆ. ಪ್ರತಾಪ್ ಅವರ ತಂದೆಯೇ ಆತನ ವೈದ್ಯಕೀಯ ವರದಿಗಳನ್ನು ಪೊಲೀಸರಿಗೆ ನೀಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಪ್ರತಾಪ್ ಪ್ರಸ್ತುತ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಮಾನವೀಯವಾಗಿ ವರ್ತಿಸಿರುವವ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಾಪ್ ಅವರ ಸಹೋದರ ಸಂಬಂಧಿ ಕಾಂತರಾಜು ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಗುಂಡ್ಲುಪೇಟೆಯಲ್ಲಿ ದಲಿತ ವ್ಯಕ್ತಿಯೊಬ್ಬ ದೇವಾಲಯ ಪ್ರವೇಶಿಸಿದ್ದ ಎನ್ನುವ ಒಂದೇ ಕಾರಣಕ್ಕೆ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಅವರ ಮೇಲೆ ಹಲ್ಲೆ ನಡೆಸಿದ್ದಷ್ಟೇ ಅಲ್ಲದೆ ಬೆತ್ತಲೆಯಾಗಿ ಮೆರವಣಿಗೆಯನ್ನೂ ಕೂಡ ಮಾಡಿದ್ದರು. ಸಮಾಜದಲ್ಲಿ ಜಾತಿ ವೈಷಮ್ಯ ಇನ್ನೂ ಮುಂದುವರೆದಿರುವುದು ದುರದೃಷ್ಟಕರ, ಇಂಥ ಕೃತ್ಯಗಳನ್ನು ವಿರೋಧಿಸಬೇಕು ಎಂದು ಕುಮಾರಸ್ವಾಮಿಯವರು ತಿಳಿಸಿದ್ದಾರೆ.
ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು, ಈ ಬಗ್ಗೆ ಗುಂಡ್ಲುಪೇಟೆ ದೇವಾಲಯದಲ್ಲಿ ದೂರು ನೀಡಿರುವುದಾಗಿ ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಆ ವ್ಯಕ್ತಿ ವಿಗ್ರಹದ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿದ್ದ ಎಂದು ಗ್ರಾಮಸ್ಥರು ದೂರು ನೀಡಿದ್ದಾರೆ ಎಂದು ಗುಂಡ್ಲುಪೇಟೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿ ಮಾನಸಿಕವಾಗಿ ಅಸಮರ್ಥನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Comment