ದಾಖಲೆ ಬರೆದ ಸುದೀಪ್ ‘ಪೈಲ್ವಾನ್’

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ಬಹು ನಿರೀಕ್ಷಿತ ಚಿತ್ರ ‘ಪೈಲ್ವಾನ್’ ಬಿಡುಗಡೆಗೂ ಮೊದಲೇ ದಾಖಲೆ ಬರೆಯಲು ಸಜ್ಜಾಗಿದೆ.

ಕನ್ನಡ, ತೆಲುಗು, ತಮಿಳು, ಹಿಂದಿ ಸೇರಿದಂತೆ ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿರುವ ‘ಪೈಲ್ವಾನ್’ ಚಿತ್ರದಲ್ಲಿ ಸುದೀಪ್ ಬಾಕ್ಸರ್ ಮತ್ತು ಪೈಲ್ವಾನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದಕ್ಕಾಗಿ ಭಾರೀ ತಯಾರಿಯನ್ನೇ ಮಾಡಿಕೊಂಡಿದ್ದ ಸುದೀಪ್ ದೇಹವನ್ನು ದಂಡಿಸಿದ್ದರು.

ಕೃಷ್ಣ ನಿರ್ದೇಶನದಲ್ಲಿ ಮೂಡಿಬಂದಿರುವ ‘ಪೈಲ್ವಾನ್’ ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂನಲ್ಲಿ ಬಿಡುಗಡೆಯಾಗಲಿದ್ದು, ವಿಶ್ವದಾದ್ಯಂತ 2500 ಸ್ಕ್ರೀನ್ ಗಳಲ್ಲಿ ತೆರೆಕಾಣಲಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’ ಸ್ಯಾಂಡಲ್ ವುಡ್ ನಲ್ಲಿ ಹೊಸ ದಾಖಲೆ ಬರೆದಿತ್ತು.

ಸುದೀಪ್ ಅಭಿನಯದ ‘ಪೈಲ್ವಾನ್’ ಕೂಡ ಅತಿಹೆಚ್ಚಿನ ಸ್ಕ್ರೀನ್ ಗಳಲ್ಲಿ ತೆರೆಕಾಣಲಿದೆ. ಬಹುಕೋಟಿ ವೆಚ್ಚದಲ್ಲಿ ಬಹು ತಾರಾಗಣದಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ ವರಮಹಾಲಕ್ಷ್ಮಿ ಹಬ್ಬದ ಕೊಡುಗೆಯಾಗಿ ಬಿಡುಗಡೆಯಾಗಲಿದ್ದು, ಅಭಿಮಾನಿಗಳ ಸಂಭ್ರಮವನ್ನು ಹೆಚ್ಚಿಸಿದೆ. ‘ಪೈಲ್ವಾನ್’ ಅಬ್ಬರಕ್ಕೆ ದಾಖಲೆಗಳೆಲ್ಲಾ ಧೂಳೀಪಟ ಆಗಲಿವೆ ಎನ್ನಲಾಗಿದ್ದು ಚಿತ್ರದ ಕುರಿತಾಗಿ ಕುತೂಹಲ ಹೆಚ್ಚಾಗತೊಡಗಿದೆ.

Leave a Comment