ದಾಸರಹಳ್ಳಿ ಕ್ಷೇತ್ರದಲ್ಲಿ ಒಳಚರಂಡಿ ಸಮಸ್ಯೆ ಬಗೆಹರಿಸುವಂತೆ ಸೂಚನೆ

 

ಬೆಂಗಳೂರು, ಜೂ 30- ಅನೇಕ ದಿನಗಳಿಂದ ಯುಜಿಡಿ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿದ್ದ ಪ್ರದೇಶಗಳಿಗೆ ಶಾಸಕ ಆರ್ ಮಂಜುನಾಥ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೊರೊನಾ ಆತಂಕ ಮಧ್ಯೆಯೂ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ರಾಜಗೋಪಾಲನಗರ ವಾರ್ಡ್ ಬಸಪ್ಪನ ಕಟ್ಟೆ ದುಗ್ಗಲಮ್ಮ ದೇವಸ್ಥಾನ ಭಾಗದಲ್ಲಿ ಹಲವು ದಿನಗಳಿಂದ ಯು.ಜಿ.ಡಿ ಸಮಸ್ಯೆಯಿಂದ ತೊಂದರೆಗೀಡಾಗಿದ್ದ ಪ್ರದೇಶಗಳಿಗೆ ಬಿಬಿಎಂಪಿ ಹಾಗೂ ಬಿಡಬ್ಲ್ಯೂಎಸ್‌ಎಸ್‌ಬಿ ಅಧಿಕಾರಿಗಳ ಸಮೇತ ಸ್ಥಳಕ್ಕೆ ಭೇಟಿ ನೀಡಿ ಶೀಘ್ರ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು.

m

ಸ್ಥಳದಲ್ಲಿಒಳಚರಂಡಿ ನೀರು ಹರಿದು ಹೋಗುತ್ತಿರುವುದನ್ನು ಪರಿಶೀಲಿಸಿದ ಅವರು ಕೂಡಲೇ ಜನರಿಗೆ ಅನುಕೂಲವಾಗುವಂತೆ ಸಮಸ್ಯೆ ಬಗೆಹರಿಸುವಂತೆ ತರಾಟೆ ತೆಗೆದುಕೊಂಡರು. ಹಾಗೂ ರಾಜಗೋಪಾಲ ನಗರ ಕಸ್ತೂರಿ ಬಡಾವಣೆಯ ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿರುವವರ ಕೆಲಸ ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

Share

Leave a Comment