ದಿನೇಶ್ ಗುಂಡುರಾವ್ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ದಾವಣಗೆರೆ, ಏ. 16 – ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಬಗ್ಗೆ ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡುರಾವ್ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಭಾರತೀಯಜನತಾ ಪಕ್ಷದ ಜಿಲ್ಲಾ ಕಾರ್ಯಕರ್ತರಿಂದು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಕೆಬಿ ಬಡಾವಣೆಯಲ್ಲಿರುವ ಪಕ್ಷದ ಕಾರ್ಯಾಲಯದಿಂದ ಮೆರವಣಿಗೆ ಮೂಲಕ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನಾಥ ಪಂಥದ ಪ್ರಮುಖ ಸಂತರಾಗಿರುವ ಯೋಗಿ ಆದಿತ್ಯನಾಥ್ ಅವರ ಬಗ್ಗೆ ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡುರಾವ್ ಅವರು ಅವಹೇಳನಕಾರಿ ಹಾಗೂ ಪ್ರಚೋದನಕಾರಿಯಾಗಿ ಭಾಷಣ ಮಾಡಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ಉಂಟು ಮಾಡಿದ್ದಾರೆ. ಈ ಕೂಡಲೇ ಅವರು ಕ್ಷಮೆಯಾಚಿಸಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದರು.
ಈ ವೇಳೆ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ಜಿಲ್ಲಾಧ್ಯಕ್ಷ ಯಶವಂತ್ ರಾವ್ ಜಾದವ್, ಎನ್.ರಾಜಶೇಖರ್, ಡಾ.ಎ.ಹೆಚ್.ಶಿವಯೋಗಿಸ್ವಾಮಿ, ಹೆಚ್.ಎಸ್.ನಾಗರಾಜ್, ಪಿ.ಸಿ.ಶ್ರೀನಿವಾಸ್, ಹೆಚ್.ಎನ್.ಶಿವಕುಮಾರ್, ಟಿಂಕರ್ ಮಂಜಣ್ಣ, ಶಿವನಗೌಡ ಟಿ ಪಾಟೀಲ್, , ಕೆ.ಹೇಮಂತಕುಮಾರ್, ಜಗದೀಶ್ ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿದ್ದರು.

Leave a Comment