ದಿ.16 ಶ್ರೀ ಸಿದ್ಧರಾಮೇಶ್ವರ ಜಯಂತಿ ವೈಭವದ ಆಚರಣೆ

ರಾಯಚೂರು.ಜ.11- ರಾಜ್ಯ ಸರ್ಕಾರ, ಕರ್ನಾಟಕ ರಾಜ್ಯ ಭೋವಿ ವಡ್ಡರ ಸಂಘ ಜಂಟಿ ಸಂಯುಕ್ತಾಶ್ರಯದಲ್ಲಿ ಸಮಾಜದ ಕುಲದೈವ ಶ್ರೀ ಶಿವಯೋಗಿ ಸಿದ್ದರಾಮೇಶ್ವರರ 845 ನೇ ಜಯಂತೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ವೈಭವದಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ಭೋವಿ ಯುವ ವೇದಿಕೆ ವಿಭಾಗೀಯ ಸಂಚಾಲಕ ವಿ.ಎಸ್. ಯಲ್ಲಪ್ಪ ಹೇಳಿದರು.

ಅವರಿಂದು ಸುದ್ದಿ ಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ, ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಕನ್ನಡ ಸಂಸ್ಕೃತಿ ಇಲಾಖೆ ಮತ್ತು ನಗರಸಭೆ ಜಂಟಿ ಸಂಯುಕ್ತ ಆಶ್ರಯದಲ್ಲಿ ದಿ.16 ರಂದು ಸ್ಥಳೀಯ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರರ 845 ನೇ ಜಯಂತ್ಸೋವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುವುದು.

ಜಯಂತಿ ನಿಮಿತ್ಯ ಗಣ್ಯರಿಗೆ ಸನ್ಮಾನ, ಎಸ್ಎಸ್ಎಲ್‌ಸಿ, ಪಿಯುಸಿ ಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರಧಾನ ಮಾಡಿ ಗೌರವಿಸಲಾಗುವುದು. ಮದ್ಯಾಹ್ನ 1 ಗಂಟೆಗೆ ನಡೆಯುವ ಜಯಂತೋತ್ಸವವನಮ್ನು ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್ ಸೇಠ್ ಉದ್ಘಾಟಿಸಲಿದ್ದು, ಸ್ಥಳೀಯ ಜನಪ್ರತಿನಿಧಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಂದಿನ ಜಯಂತೋತ್ಸವದಲ್ಲಿ ಸಮಾಜದ ಬಾಂಧವರು, ರಾಜಕೀಯ ಮುಖಂಡರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ವಿಗೆ ಭಾಜನರಾಗುವಂತೆ ಕೋರಿದರು.

ಯುವ ವೇದಿಕೆ ಅಧ್ಯಕ್ಷರಾದ ನಾರಾಯಣ ಸ್ವಾಮಿ, ಮಾಜಿ ಅಧ್ಯಕ್ಷ ಬಿ.ಈರಣ್ಣ, ಆಂಜಿನೇಯ ಗಾಣಧಾಳ, ಹನುಮಂತ, ಮಹಿಳಾ ಘಟಕದ ಅಧ್ಯಕ್ಷೆ ಶಶಿಕಲಾ ಭೀಮರಾಯ, ಈರಮ್ಮ ಭೋವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Leave a Comment