ದಿ.17 ಶಿಕ್ಷಕರ ದಿನಾಚರಣೆ: ಪ್ರಶಸ್ತಿ ಪ್ರದಾನ-ಪ್ರತಿಭಾ ಪುರಸ್ಕಾರ

ರಾಯಚೂರು.ಸೆ.13- ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ತಾಲೂಕು ಘಟಕ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ದಿ.17 ರಂದು ಸ್ಥಳೀಯ ಕೃಷಿ ವಿವಿ ಪ್ರೇಕ್ಷಾಗೃಹ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆಂದು ಪ್ರಧಾನ ಕಾರ್ಯದರ್ಶಿ ನರಸಿಂಹಲು ಹೇಳಿದರು.
ಅವರಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್ ಸೇಠ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಸಂಸದ ಬಿ.ವಿ.ನಾಯಕ, ಜಿ.ಪಂ.ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ, ವಿಧಾನ ಪರಿಷತ್ ಸದಸ್ಯರಾದ ಎನ್.ಎಸ್.ಬೋಸರಾಜು, ಶರಣಪ್ಪ ಮಟ್ಟೂರು, ಬಸವರಾಜ ಪಾಟೀಲ್ ಇಟಗಿ, ಶಾಸಕರಾದ ತಿಪ್ಪರಾಜು ಹವಾಲ್ದಾರ್, ತಾ.ಪಂ.ಅಧ್ಯಕ್ಷೆ ಶಾರದಮ್ಮ ಬಾಲರಾಜ್, ಕೃಷಿ ವಿವಿ ಕುಲಪತಿ ಡಾ.ಪಿ.ಎಂ.ಸಾಲಿಮಠ, ನಗರಸಭೆ ಅಧ್ಯಕ್ಷೆ ಹೇಮಲತಾ ಪಿ.ಬೂದೆಪ್ಪ, ಉಪಾಧ್ಯಕ್ಷ ಜಯಣ್ಣ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿ.ಪಂ.ಸಿಇಓ ಅಭಿರಾಮ ಬಿ.ಶಂಕರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಮುಖ್ಯಾತಿಥಿಗಳಾಗಿ ಭಾಗವಹಿಸುವರು.
ಶಾಸಕ ಡಾ.ಶಿವರಾಜ ಪಾಟೀಲ್ ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು. ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ, ಜಿಲ್ಲಾಧ್ಯಕ್ಷ ವೀರಭದ್ರಪ್ಪ, ತಾಲೂಕಾಧ್ಯಕ್ಷ ಜೆ.ವಿನೋದಕುಮಾರ, ಪ್ರೌಢ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸೈಯದ್ ಸಿರಾಜುದ್ದಿನ್, ತಾಲೂಕಾಧ್ಯಕ್ಷ ಮೈನುಲ್ ಹಕ್, ಪ್ರಭಾರಿ ಡಿಡಿಪಿಐ ಆರ್.ಇಂದಿರಾ, ಕ್ಷೇತ್ರ ಶಿಕ್ಷಣಾಧಿಕಾರಿ ರಾಮಚಂದ್ರಪ್ಪ ಶಿವಂಗಿ ಆಗಮಿಸುವರು.
ಇದೇ ವೇಳೆ 26 ಶಿಕ್ಷಕರು, ನಾಲ್ವರು ದೈಹಿಕ ಶಿಕ್ಷಣ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಅಲ್ಲದೇ, ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದಿರುವ ಶಿಕ್ಷಕರ ಮಕ್ಕಳು ಎಸ್.ಎಸ್.ಎಲ್.ಸಿ, ಪಿಯುಸಿಯಲ್ಲಿ ಶೇ.70 ರಷ್ಟು ಅಂಕಗಳಿಸಿರುವವರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆಂದರು.
ವೇದಿಕೆಯಲ್ಲಿ ಜಿಲ್ಲಾಧ್ಯಕ್ಷ ಜೆ.ವಿನೋದ ಕುಮಾರ, ಈರಪ್ಪ, ಮುದ್ದನಗೌಡ, ರಾಮು, ತನುಜಾ, ಸೋನಮ್ಮ, ನೂರ್‌ಹುಲ್ ಹಕ್ ಉಪಸ್ಥಿತರಿದ್ದರು.

Leave a Comment