ದುರ್ಬಲಗೊಂಡ ತಿತ್ಲಿ ಚಂಡಮಾರುತ

ಭುವನೇಶ್ವರ್, ಅ. ೧೨- ಒಡಿಶಾದಲ್ಲಿ ತಿತ್ಲಿ ಚಂಡಮಾರುತ ಅಬ್ಬರ ಕ್ಷೀಣಿಸಿದೆ. ಭಾರಿ ಮಳೆಯಿಂದಾಗಿ ಕುಸಿದು ಬಿದ್ದಿರುವ ವಿದ್ಯುತ್ ವ್ಯವಸ್ಥೆ ಮತ್ತು ರಸ್ತೆ ಸಂಪರ್ಕವನ್ನು ಮರಳಿ ಸ್ಥಾಪಿಸುವ ಕಾರ್ಯವನ್ನು ಚುರುಕುಗೊಳಿಸಲಾಗಿದೆ. ಕಿತ್ಲಿ ಚಂಡಮಾರುತ, ಕ್ಷೀಣಿಸಿದ್ದು, ಹಾನಿಗೀಡಾಗಿರುವ ಪ್ರದೇಶದಲ್ಲಿ ಪರಿಹಾರ ಕಾರ್ಯಕೈಗೊಳ್ಳಲಾಗಿದೆ. ವಿಶೇಷ ಪರಿಹಾರ ಆಯುಕ್ತ ಬಿ.ಪಿ ಸೇಥಿ ತಿಳಿಸಿದ್ದಾರೆ.

ಧಾರಾಕಾರ ಮಳೆಯಿಂದಾಗಿ ದಕ್ಷಿಣ ಒಡಿಶಾದಲ್ಲಿ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿವೆ. ಇದರಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

150 ಕಿ.ಮೀ ವೇಗದಲ್ಲಿ ತಿತ್ಲಿ ಚಂಡಮಾರುತ ಬೀಸಿದ್ದರಿಂದ ಧಾರಾಕಾರ ಮಳೆಯಿಂದಾಗಿ ಒಡಿಶಾ ಮತ್ತು ಆಂಧ್ರಪ್ರದೇಶದಲ್ಲಿ 8 ಮಂದಿ ಮೃತಪಟ್ಟಿದ್ದರು. ಒಡಿಶಾದ 5 ಕರಾವಳಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ 3 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ ಎಂದು ಅವರು ತಿಳಿಸಿದರು.

ಗಂಜಂ, ಗಜಪಟಿ, ರಾಯಘಡ, ಬಾಲಸೋರ್ ಜಿಲ್ಲೆಗಳಲ್ಲಿ ಪರಿಸ್ಥಿತಿ ಆತಂಕಕಾರಿಯಾಗಿದೆ. ನದಿಗಳು ತುಂಬಿ ಹರಿಯುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನದಿಯ ಆಸುಪಾಸಿನಲ್ಲಿ ವಾಸಿಸುತ್ತಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ.

Leave a Comment