ದೆಹಲಿ ಹಿಂಸಾಚಾರ ಖಂಡಿಸಿ ರಾಜಭವನಕ್ಕೆ ವಿದ್ಯಾರ್ಥಿಗಳ ಮುತ್ತಿಗೆ ಯತ್ನ

ಬೆಂಗಳೂರು : ರಾಷ್ಟ್ರ ರಾಜಧಾನಿಯಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ ಪರ ಹಾಗೂ ವಿರುದ್ಧವಾಗಿ ನಡೆಯುತ್ತಿರುವ ಹಿಂಸಾಚಾರಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ. ಇಂದು ವಿದ್ಯಾರ್ಥಿ ಸಂಘಟನೆಯಿಂದ ಘಟನೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದು, ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಲಾಯಿತು.

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ದೆಹಲಿಯಲ್ಲಿನ ಹಿಂಸಾಚಾರವನ್ನು ತೀವ್ರವಾಗಿ ಖಂಡಿಸಿದರು. ಕೇಂದ್ರ ಸರ್ಕಾರ ಹಾಗೂ ದೆಹಲಿ ಪೊಲೀಸರ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾನಿರತರು ರಾಜಭವನದ ಬಳಿ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು. ಪ್ರತಿಭಟನಾನಿರತ ವಿದ್ಯಾರ್ಥಿಗಳು ಪ್ರತಿಭಟನೆಗೆ ಪೊಲೀಸರಿಂದ ಅನುಮತಿ ಪಡೆದಿರಲಿಲ್ಲ. ಏಕಾಏಕಿ ರಾಜಭವನದ ಬಳಿ ಜಮಾಯಿಸಿ ಪ್ರತಿಭಟನೆ ನಡೆಸಿದರು. ಬಳಿಕ ರಾಜಭವನಕ್ಕೂ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ, ಅಡ್ಡಿಪಡಿಸಿದ ಪೊಲೀಸರು ಪ್ರತಿಭಟನಾನಿರತರನ್ನು ವಶಕ್ಕೆ ಪಡೆದರು

Leave a Comment