ದೇವಸ್ಥಾನದ ಹುಂಡಿ ಹಣ, ಚಿನ್ನಾಭರಣ ದೋಚಿದ ಕಳ್ಳರು

ಮೈಸೂರು,ಜೂ.14: ದೇವಸ್ಥಾನದ ಬಾಗಿಲಿನ ಬೀಗ ಒಡೆದು ಹುಂಡಿಯಲ್ಲಿದ್ದ ನಗದನ್ನು ಕಳ್ಳರು ಕದ್ದೊಯ್ದ ಘಟನೆ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಡಾ.ರಾಜ್ ಕುಮಾರ್ ರಸ್ತೆಯಲ್ಲಿರುವ ಶ್ರೀ ಕಲ್ಯಾಣ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿದ್ದು, ಹುಂಡಿಯಲ್ಲಿದ್ದ ಹಣವನ್ನು ದೋಚಿದ್ದಾರೆ. ಚಿಲ್ಲರೆ ಹಣವನ್ನು ಅಲ್ಲೇ ಬಿಟ್ಟು ತೆರಳಿದ್ದಾರೆ. ಅಷ್ಟೇ ಅಲ್ಲದೇ ಕಚೇರಿಯಲ್ಲಿರುವ ಬೀರುವನ್ನು ಮೀಟಿ ಕಳ್ಳತನ ಮಾಡಿದ್ದಾರೆ. ಬೀರುವಿನಲ್ಲಿರುವ ಚಿನ್ನಾಭರಣವನ್ನು ದೋಚಿದ್ದಾರೆ. ಕಳ್ಳರು ಬಂದಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಉದಯಗಿರಿ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎಷ್ಟು ಮೌಲ್ಯದ ಚಿನ್ನಾಭರಣಗಳು ಕಳ್ಳತನೌಅಗಿವೆ, ಹುಂಡಿಯಲ್ಲಿರುವ ಅಂದಾಜು ಎಷ್ಟು ಹಣ ಕಳ್ಳರು ಕದ್ದೊಯ್ದಿದ್ದಾರೆಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ.

Leave a Comment