ದೈವಪಾತ್ರಿಯ ಮೇಲೆ ರೇಪ್ ಕೇಸ್! ಹಲ್ಲೆಗೈದ ಐವರ ಸೆರೆ

ಮಂಗಳೂರು, ಮೇ ೧೬- ಬಾಲಕನೊಂದಿಗೆ ಸಲಿಂಗಕಾಮ ನಡೆಸಿದ ಆರೋಪದಡಿ ದೈವ ಪಾತ್ರಿ ಹಾಗೂ ಆತನ ಮೇಲೆ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ದೈವಪಾತ್ರಿ ಸಹಿತ ೫ ಮಂದಿಯನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬಿಕರ್ನಕಟ್ಟೆಯ ದೈವ ಪಾತ್ರಿಯ ಮೇಲೆ ಹಲ್ಲೆ ನಡೆಸಿ ತಲೆ ಬೋಳಿಸಿದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು. ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಅವರ ಸೂಚನೆಯಂತೆ ಬರ್ಕೆ ಠಾಣೆಯ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿ ತನಿಖೆ ಆರಂಭಿಸಿದ್ದರು.
ಬಾಲಕನ ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿರುವುದನ್ನು ದೈವ ಪಾತ್ರಿ ಒಪ್ಪಿಕೊಂಡಿದ್ದು ಆತನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಕಾನೂನು ಕೈಗೆತ್ತಿಕೊಂಡು ಆತನ ಮೇಲೆ ಹಲ್ಲೆ ಮಾಡಿರುವುದನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಹಲ್ಲೆ ನಡೆಸಿದವರ ವಿರುದ್ಧ ಬರ್ಕೆ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ದೈವ ಪಾತ್ರಿ ಲೋಕೇಶ್ ಪೂಜಾರಿ ಓರ್ವ ಬಾಲಕನ ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದ ಎಂದು ಆರೋಪಿಸಿ ಆತನ ಮೇಲೆ ಹಲ್ಲೆ ನಡೆಸಿ, ಕೈಯ್ಯಲ್ಲಿದ್ದ ಕಡಗವನ್ನು ತೆಗೆಸಿ, ತಲೆಕೂದಲು ಕತ್ತರಿಸಲಾಗಿತ್ತು.

Leave a Comment