ದ್ವಿಚಕ್ರವಾಹನದಲ್ಲಿಟ್ಟಿದ್ದ 4.5 ಲಕ್ಷ ರೂ. ಕಳವು

ತುಮಕೂರು, ಅ. ೧೨- ದ್ವಿಚಕ್ರವಾಹನದಲ್ಲಿ ಇಟ್ಟಿದ್ದ 4.5 ಲಕ್ಷ ರೂ. ಹಣವನ್ನು ದುಷ್ಕರ್ಮಿಗಳು ದೋಚಿಕೊಂಡು ಪರಾರಿಯಾಗಿರುವ ಘಟನೆ ನಗರದ ಕರೂರು ವೈಶ್ಯ ಬ್ಯಾಂಕ್ ಮುಂಭಾಗದಲ್ಲಿ ನಡೆದಿದೆ.

ಅಂಜನ್‌ಕುಮಾರ್ ಎಂಬುವರೇ ಹಣ ಕಳೆದುಕೊಂಡ ವ್ಯಕ್ತಿ. ಇವರು ಮನೆ ನಿರ್ಮಾಣಕ್ಕಾಗಿ ಬ್ಯಾಂಕಿನಲ್ಲಿ ಸಾಲ ಪಡೆದು ಹಣವನ್ನು ದ್ವಿಚಕ್ರ ವಾಹನದ ಸೀಟಿನ ಕೆಳಗಡೆಯ ಬ್ಯಾಕ್ಸ್‌‌ನಲ್ಲಿ ಇಟ್ಟಿದ್ದರು. ಇದನ್ನು ಗಮನಿಸಿದ ದುಷ್ಕರ್ಮಿಗಳು ಹಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ ಎಂಬುದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಈ ಸಂಬಂಧ ತುಮಕೂರು ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಜರುಗಿಸುತ್ತಿದ್ದಾರೆ.

Leave a Comment