ದ್ವಿತೀಯ ಪಿಯುಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಧಾರವಾಡ,ಫೆ.28-ಇದೇ ಮಾರ್ಚ್ 4 ರಿಂದ ಮಾರ್ಚ 23ರವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆಗಳು ಜಿಲ್ಲೆಯಾದ್ಯಂತ ನಡೆಯಲಿದೆ. ಪರೀಕ್ಷಾ ಸಮಯವಾದ ಬೆಳಿಗ್ಗೆ 10-15 ರಿಂದ ಮಧ್ಯಾಹ್ನ 1-30ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಧ್ವನಿವರ್ಧಕಗಳ ನಿಷೇಧ ಹಾಗೂ ಸಮೀಪದ ಝೆರಾಕ್ಸ್ ಅಂಗಡಿಗಳು ಪರೀಕ್ಷಾ ಅವಧಿಯಲ್ಲಿ ಕಾರ್ಯನಿರ್ವಹಿಸದಂತೆ ನಿಷೇಧಿಸಿ, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಆವರಣವನ್ನು 144 ಕಲಂ ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ಅವರು ಆದೇಶ ಹೊರಡಿಸಿದ್ದಾರೆ.

Leave a Comment