ನಂ.ಗೂಡಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೇಸ್, ಜೆ.ಡಿ.ಎಸ್ ಕಾರ್ಯಕರ್ತರು ಆಕ್ರೋಶ
ನಂಜನಗೂಡು ಸೆ.10- ತೈಲ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೇಸ್ ಕರೆ ಕೊಟ್ಟಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ನಂಜನಗೂಡಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ವರತುಪಡಿಸಿ ಎಂದಿನಂತೆ ವ್ಯಾಪಾರ ವಹಿವಾಟು.
ಕಾಂಗ್ರೇಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ಜೆ.ಡಿ.ಎಸ್. ಪಕ್ಷದ ಕಾರ್ಯಕರ್ತರು ಮುಖಂಡರು ಒಳಗೊಂಡಂತೆ ಇಂದು ಹುಲ್ಲಹಳ್ಳಿ ಸರ್ಕಲ್ ಬಳಿ ಜಮಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ನಂತರ ಮಾತನಾಡಿದ ಮಾಜಿ ಶಾಸಕ ಕೇಶವಮೂರ್ತಿರವರು ಪೆಟ್ರೋಲ್, ಡೀಸೆಲ್, ಗೃಹಬಳಕೆ ಗ್ಯಾಸ್ ಧರವನ್ನು ಪ್ರತಿದಿನ ಗಗನಕ್ಕೆ ಏರುತ್ತಲೇ ಇದೆ. ಇದರ ಹಿನ್ನೆಲೆಯಲ್ಲಿ ಜನ ತತ್ತರಿಸಿ ಹೋಗಿದ್ದಾರೆ. ಆದ್ದರಿಂದ ಇಂಧನ ಬೆಲೆಯನ್ನು ಇಳಿಕೆ ಮಾಡಬೇಕೆಂದು ಆಗ್ರಹಿಸಿದರು ಹಾಗೂ ಕೇಂದ್ರದಲ್ಲಿ ಬಿ.ಜೆ.ಪಿ. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸುಳ್ಳು ಆಶ್ವಾಸನೆಗಳನ್ನು ನೀಡುತ್ತಾ ದೇಶದ ಜನರಿಗೆ ನರೇಂದ್ರ ಮೋದಿಯವರು ದೇಶದ ಅಭಿವೃದ್ದಿಯ ವಿರುದ್ಧ ನಡೆದುಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು. ಇವರು ಪೆಟ್ರೋಲ್, ಡೀಸೆಲ್ ಮತ್ತು ಸಿಲಿಂಡರ್ ಬೆಲೆ ಏರಿಕೆ ಮಾಡುವ ಮೂಲಕ ಆರ್ಥಿಕ ಸಂಕಷ್ಟಕ್ಕೀಡು ಮಾಡುತ್ತಿದ್ದಾರೆ. ಬೆಲೆ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ನಂತರ ಹುಲ್ಲಹಳ್ಳಿ ಸರ್ಕಲ್ ವೃತ್ತದಿಂದ ಹೊರಟ ಮೆರವಣಿಗೆ ಹಳೇ ತಾಲ್ಲೂಕು ಕಛೇರಿ ಮುಂಬಾಗದ ರಸ್ತೆ ಹಾಗೂ ಅಂಗಡಿ ಬೀದಿ, ಶ್ರೀ ಶ್ರೀಕಂಠೇಶ್ವರ ದೇವಾಲಯ ರಸ್ತೆಯ ಮೂಲಕ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ಮೆರವಣಿಗೆ ಸಾಗಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೇಶವಮೂರ್ತಿ, ಹೆಚ್.ಸಿ.ಬಸವರಾಜು, ಜಿಲ್ಲಾ ಪಂಚಾಯಿತಿ ಸದಸ್ಯೆ ಲತಾ ಸಿದ್ದಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯ ಮೂಗಶೆಟ್ಟಿ, ನಗರಸಭಾ ಅಧ್ಯಕ್ಷೆ ಪುಷ್ಪಲತಾ, ಜೆ.ಡಿ.ಎಸ್. ಪಕ್ಷದ ತಾಲ್ಲೂಕು ಅಧ್ಯಕ್ಷ ಮಹದೇವಸ್ವಾಮಿ, ನಗರಾಧ್ಯಕ್ಷ ಭಾಸ್ಕರ್, ಮಹೇಶ್, ಇಂದ್ರ, ಮಂಜುನಾಥ್, ಅಕ್ಬರ್ ಅಲಿ, ನಾಗರಾಜು, ಸ್ಥಾಯಿ ಸಮಿತಿ ಅಧ್ಯಕ್ಷ ರಾಮಕೃಷ್ಣ, ಮಾಜಿ ಅಧ್ಯಕ್ಷ ಚಂದ್ರು, ಸುಂದರ್‍ರಾಜ್, ಜಗದೀಶ್, ನಗರಸಭಾ ಸದಸ್ಯ ರಾಜೇಶ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

Leave a Comment