ನಟ ಶಿವರಾಜ್ ಕುಮಾರ್‌ಗೆ ಯಶಸ್ವಿ ಚಿಕಿತ್ಸೆ

 

ಬೆಂಗಳೂರು, ಜು ೧೧- ಇತ್ತೀಚೆಗೆ ಚಿತ್ರೀಕರಣದ ವೇಳೆ ಬಲ ಭುಜಕ್ಕೆ ಪೆಟ್ಟು ಮಾಡಿಕೊಂಡು ಚಿಕಿತ್ಸೆಗಾಗಿ ಲಂಡನ್‌ಗೆ ತೆರಳಿದ್ದ ನಟ ಶಿವರಾಜ್ ಕುಮಾರ್‌ಗೆ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಅವರ ಆರೋಗ್ಯ ಸುಧಾರಿಸಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಕೆಪಿ ಶ್ರೀಕಾಂತ್ ಟ್ವೀಟ್ ಮಾಡಿದ್ದು, ಶಿವಣ್ಣನಿಗೆ ಚಿಕಿತ್ಸೆ ಯಶಸ್ವಿಯಾಗಿದೆ ಎಂದು ಬರೆದುಕೊಂಡಿದ್ದಾರೆ. ತಮ್ಮ ಹೊಸ ಸಿನಿಮಾ ಸಾಹಸ ದೃಶ್ಯದ ಶೂಟಿಂಗ್ ವೇಳೆ ಅವರ ಬಲ ಭುಜಕ್ಕೆ ಗಾಯವಾಗಿದ್ದು ಸಾಹಸ ದೃಶ್ಯಗಳಲ್ಲಿ ಪಾಲ್ಗೊಳ್ಳಲು ಕಷ್ಟಪಡುವಂತಾಗಿತ್ತು. ಹೀಗಾಗಿ ಅವರು ತಮ್ಮ ಬಲಭುಜದ ನೋವಿನ ಚಿಕಿತ್ಸೆಗಾಗಿ ಲಂಡನ್‌ಗೆ ತೆರಳಿದ್ದ ಶಿವಣ್ಣ, ಅಲ್ಲಿ ಭುಜದ ನೋವಿನ ಹಿನ್ನೆಲೆಯಲ್ಲಿ ಆಪರೇಷನ್ ಒಳಗಾಗಿದ್ದಾರೆ. ಇನ್ನು ೩ ತಿಂಗಳುಗಳ ಕಾಲ ಯಾವುದೇ ಚಿತ್ರದ ಸಾಹಸ ದೃಶ್ಯಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲವಂತೆ. ಹೀಗಾಗಿ ಅವರು ಇನ್ನೂ ನಾಲ್ಕು ತಿಂಗಳ ನಂತರ ಎಂದಿನಂತೆ ಸಿನಿಮಾದ ಶೂಟಿಂಗ್‌ನಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

Leave a Comment