ನನಗೂ, ಐಎಂಎಗೂ ಯಾವುದೇ ಸಂಬಂಧವಿಲ್ಲ- ರೋಷನ್‌ ಬೇಗ್

ಬೆಂಗಳೂರು: ಚಿನ್ನಾಭರಣದ ಜತೆಗೆ ಹೆಚ್ಚಿನ ಬಡ್ಡಿಯ ಆಸೆ ತೋರಿಸಿದ್ದ ಐಎಂಎ ಜ್ಯುವೆಲರ್ಸ್ ಮಾಲೀಕ ಮನ್ಸೂರ್ ನೂರಾರು ಕೋಟಿ ರೂಪಾಯಿ ಸಂಗ್ರಹಿಸಿದ್ದರು ಆದರೆ ಈಗ ಅಂಗಡಿ ಮಾಲೀಕ ನಾಪತ್ತೆಯಾಗಿದ್ದು ಅಂಗಡಿ ಮುಂದೆ ಸಾವಿರಾರು ಜನತೆ ತಮ್ಮ ಹಣವನ್ನು ವಾಪಸ್ಸು ನೀಡುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ನಡುವೆ ಐಎಂಎ ಜ್ಯುವೆಲರ್ಸ್ ಮಾಲೀಕ ಮನ್ಸೂರ್ ನಾಪತ್ತೆ ಪ್ರಕರಣದಲ್ಲಿ ಶಿವಾಜಿನಗರ ಶಾಸಕ ರೋಷನ್ ಬೇಗ್ ಹೆಸರು ಕೇಳಿ ಬಂದಿದ್ದು ರೋಷನ್‌ ಬೇ‌ಗ್‌ ಅವರತು ನನ್ನಿಂದ ಕೋಟ್ಯಾಂತರ ರೂ ಹಣವನ್ನು ತೆಗೆದುಕೊಂಡಿದ್ದಾರೆ. ಈಗ ಹಣ ಕೇಳಿದರೆ ನನಗೆ ಧಮ್ಕಿ ಹಾಕುತ್ತಿದ್ದಾರೆ ಅಂತ ನಾಪತ್ತೆಯಾಗುವ ಮುನ್ನ ಐಎಂಎ ಜ್ಯುವೆಲರ್ಸ್ ಮಾಲೀಕ ಮನ್ಸೂರ್ ಮಾತನಾಡಿದ್ದಾರೆ ಎನ್ನಲಾಗಿರುವ ಆಡಿಯೋದಲ್ಲಿ ಹೇಳಲಾಗಿದೆ.

ಈ ನಡುವೆ ತಮ್ಮ ವಿರುದ್ದ ಐಎಂಎ ಜ್ಯುವೆಲರ್ಸ್ ಮಾಲೀಕ ಮನ್ಸೂರ್ ಮಾಡಿರುವ ಆರೋಪಕ್ಕೆ ಸಂಬಂಧಪಟ್ಟಂತೆ ರೋಷನ್ ಬೇಗ್ ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದು, ತಮಗೂ ಐಎಂಎ ಜ್ಯುವೆಲರ್ಸ್ಗೂ ಯಾವುದೇ ಸಂಬಂಧವಿಲ್ಲ. ಈ ವಿಷಯದಲ್ಲಿ ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಅಂತ ಹೇಳಿದ್ದಾರೆ. ಇದೇ ವೇಳೆ ಅವರು ನಾನೊಬ್ಬ ಜನಪ್ರತಿನಿಧಿಯಾಗಿ, ಸಮಾಜ ಸೇವಕನಾಗಿ ಸಮಾಜ ಸೇವೆಯಲ್ಲಿ ತೊಡಗಿದ್ದ ಸಂಸ್ಥೆಗಳ ಜತೆ ಸಂಬಂಧ ಮತ್ತು ಸಂಪರ್ಕ ಹೊಂದಿರುತ್ತೇನೆ. ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮತ್ತು ವದಂತಿಗಳನ್ನು ಹಬ್ಬಿಸುತ್ತಿರುವ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ನಾನು ನಿರ್ಧರಿಸಿದ್ದೇನೆ ಎಂದು ಟ್ವೀಟ್ನಲ್ಲಿ ಸ್ಪಷ್ಟಪಡಿಸಿದ್ದಾರೆ.

Leave a Comment