ನವಭಾರತ ನಿರ್ಮಾಣದ ಸಂಕಲ್ಪ

ನವದೆಹಲಿ, ಫೆ. ೧- 2022ರ ವೇಳೆಗೆ ನವಭಾರತ ನಿರ್ಮಾಣ ಮಾಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
2019-20ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹೆಜ್ಜೆ ಇಟ್ಟಿದ್ದು, ಎಲ್ಲರೂ ಕೈಜೋಡಿಸಬೇಕು ಎಂದು ಕರೆನೀಡಿದರು.
ಹದಗೆಟ್ಟ ಆರ್ಥಿಕ ಪರಿಸ್ಥಿತಿಗೆ ಚೇತರಿಕೆ ನೀಡುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡಿದ್ದು, ಮೇ ಅಂತ್ಯದವರೆಗಿನ ಮಧ್ಯಂತರ ಬಜೆಟ್ ಇದಾಗಿದೆ ಎಂದು ಹೇಳಿದರು.
ಅನಾರೋಗ್ಯದಿಂದ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅರುಣ್ ಜೇಟ್ಲಿ ಬದಲಾಗಿ ಬಜೆಟ್ ಮಂಡಿಸುವ ಅವಕಾಶ ಸಿಕ್ಕಿದ್ದು, ಅರುಣ್ ಜೇಟ್ಲಿ ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹೇಳಿದರು.

Leave a Comment