ನಾನೂ ಕೂಡ ಸಚಿವ ಆಕಾಂಕ್ಷಿ : ಹೆಚ್.ವಿಶ್ವನಾಥ್

ಮೈಸೂರು. ಜೂ.12: ಸಚಿವ ಸಂಪುಟ ಪುನರ್ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಹೆಚ್.ವಿಶ್ವನಾಥ್ ನಾನೂ ಕೂಡ ಸಚಿವ ಆಕಾಂಕ್ಷಿ ಎಂದಿದ್ದಾರೆ.
ಮೈಸೂರಿನಲ್ಲಿ ಇಂದು ಬೆಳಿಗ್ಗೆ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನನಗೆ ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯುತವಾಗಿ ನಿರ್ವಹಣೆ ಮಾಡುತ್ತೇನೆ. ಆದರೆ ಸಚಿವ ಸ್ಥಾನ ನೀಡುವುದು ಮುಖ್ಯ ಮಂತ್ರಿಗಳಿಗೆ ಬಿಟ್ಟಿದ್ದು. ಸಚಿವ ಸ್ಥಾನ ನೀಡುವ ಅಧಿಕಾರ ಅವರಿಗೆ ಇದೆ. ಜೆ.ಡಿ.ಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಪುನಃ ಪಡೆಯುವ ಪ್ರಶ್ನೆಯೇ ಇಲ್ಲ. ಪಕ್ಷದಲ್ಲಿ ಸಮರ್ಥ ಯುವಕರು ಇದ್ದಾರೆ‌. ಯುವಕರಿಗೆ ಅವಕಾಶ ನೀಡಿ ಅಂತ ವರಿಷ್ಠರಿಗೆ ಹೇಳಿದ್ದೇನೆ. ನನ್ನ ಕ್ಷೇತ್ರದಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದೇನೆ. ಹುಣಸೂರಿನ ಸರ್ವತೋಮುಖ ಅಭಿವೃದ್ಧಿಯೇ ನನ್ನ ಗುರಿ ಎಂದಿದ್ದಾರೆ.

Leave a Comment