ನಾಲ್ಕನೇ ಶನಿವಾರ ಸರ್ಕಾರಿ ರಜೆ: ಜೂ 16 ರಂದು ರಜೆ

ಬೆಂಗಳೂರು, ಜೂ 12- ಪ್ರತಿತಿಂಗಳ ನಾಲ್ಕನೇ ಶನಿವಾರ ಸರ್ಕಾರಿ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ತಕ್ಷಣದಿಂದಲೇ ಇದು ಜಾರಿಗೆ ಬರಲಿದ್ದು, ಸರ್ಕಾರಿ ಆದೇಶ ಇದೀಗ ರಾಜ್ಯಪತ್ರದಲ್ಲಿ ಪ್ರಕಟವಾಗಿದೆ. ಇದರಿಂದಾಗಿ ಜೂನ್ 16ರ ನಾಲ್ಕನೇ ಶನಿವಾರ ಸರ್ಕಾರಿ ರಜೆಯಾಗಲಿದೆ. ಇನ್ನು ಪ್ರತಿ ತಿಂಗಳ ನಾಲ್ಕನೇ ಶನಿವಾರ ಸರ್ಕಾರಿ ರಜೆ ಎಂದು ಘೋಷಿಸಲಾಗಿದೆ.

” ತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ ಆದೇಶದವರೆಗೆ ಪ್ರತಿತಿಂಗಳ ನಾಲ್ಕನೇ ಶನಿವಾರವನ್ನು ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಎಂದು ಘೋಷಿಸಿದೆ. ಪ್ರಸ್ತುತ ಸರ್ಕಾರಿ ನೌಕರರಿಗೆ ಇರುವ 15 ದಿನಗಳ ಸಾಂದರ್ಭಿಕ ರಜೆಯನ್ನು 10 ದಿನಗಳಿಗೆ ಇಳಿಸಲಾಗಿದೆ” ಎಂದು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ.

Leave a Comment