ನಾಲ್ವಡಿ ಕೃಷ್ಣರಾಜ ಒಡೆಯರ್ ಇಂದಿಗೂ ಜನಮಾನಸದಲ್ಲಿ ಉಳಿದಿದ್ದಾರೆ-ಜಿ.ಟಿ.ಡಿ

ಮೈಸೂರು. ಜೂ. 4. ಕೃಷ್ಣರಾಜ ಸಾಗರದಲ್ಲಿ ಜಲಾಶಯ ನಿರ್ಮಾಣ, ಮೈಸೂರಿನಲ್ಲಿ ವಿಶ್ವವಿದ್ಯಾನಿಲಯ, ಗಂಧದೆಣ್ಣೆ ಕಾರ್ಖಾನೆ, ಭದ್ರಾವತಿಯಲ್ಲಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗಳ ಇವುಗಳ ಸ್ಧಾಪನೆಗೆ ಕಾರಣ ಕರ್ತರಾದ ದಿ|| ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ಇಂದಿಗೂ ಜನಮಾನಸದಲ್ಲಿ ಉಳಿದಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಹೇಳಿದರು.
ಅವರು ಇಂದು ಬೆಳಿಗ್ಗೆ ನಗರದ ವಿನೋಬರಸ್ತೆಯಲ್ಲಿರುವ ಕಲಾ ಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ಇವುಗಳ ಸಂಯುಕ್ತಾ ಶ್ರಯದಲ್ಲಿ ಆಯೋಜಿಸಿದ್ದ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ 135 ನೇ ಜಯಂತಿ ಕಾರ್ಯಕ್ರಮವನ್ನು ನಾಲ್ವಡಿ ಕೃಷ್ಣರಾಜ ಒಡೆಯರ್‍ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಉದ್ಘಾಟಿಸಿ. ಮಾತನಾಡುತ್ತಿದ್ದರು. ಒಡೆಯರ್‍ರವರು ತಮ್ಮ ಆಡಳಿತಾವಧಿಯಲ್ಲಿ ಸಮಾಜದ ಜನತೆಗೆ ಅನುಕೂಲವಾಗುವಂತೆ ಹಲವಾರು ಯೋಜನೆಗಳನ್ನು ರೂಪಿಸಿದವರಾಗಿದ್ದರು. ಕುಡಿಯುವ ನೀರು, ಆಸ್ಪತ್ರೆ, ಕಡು ಬಡವರ ಮಕ್ಕಳಿಗೆ ಉದ್ಯೋಗ ಕೊಡಿಸುವ ಸಲುವಾಗಿ ಅನೇಕ ಕೃಗಾರಿಕೆಗಳನ್ನು ಸ್ಧಾಪಿಸಿದರು. ಅವರ ಆಡಳಿತಾವಧಿಯಲ್ಲಿ ಸ್ಧಾಪನೆಗೊಂಡ ಮೈಸೂರಿನ ಗಂಧದೆಣ್ಣೆ ಹಾಗೂ ಭದ್ರಾವತಿಯಲ್ಲಿರುವ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗಳು ಸಾವಿರಾರು ಮಂದಿಗೆ ಉದ್ಯೋಗ ಒದಗಿಸಿ ಅವರು ನೆಮ್ಮದಿಯ ಜೀವನ ನೆಡೆಸಲು ಅನುವು ಮಾಡಿಕೊಟ್ಟಿವೆ. ಹಾಗಾಗಿ ಅವರು ಇಂದಿಗೂ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ದೇವೇಗೌಡ ನುಡಿದರು.
ಸಂಸ್ಧಾನದ ಆರ್ಧಿಕ ವ್ಯವಹಾರಗಳು ಸುಲಲಿತವಾಗಿ ನೆಡೆಯಲು ಅನುಕೂಲವಾಗುವಂತೆ ಸ್ಟೇಟ್ ಬ್ಯಾಂಕ್ ಆಫ್ ಮೈಸೂರನ್ನು ಸ್ಧಾಪಿಸಿದ ಕೀರ್ತಿ ಅವರಿಗೆ ಸಲುತ್ತದೆ ಅಂದು ಅವರು ಸ್ಧಾಪಿಸಿದ ಬ್ಯಾಂಕ್ ದೇಶಾದ್ಯಂತ ತನ್ನ ಶಾಖೆಗಳನ್ನು ತೆರೆದು ಆರ್ಧಿಕ ವ್ಯವಹಾರಗಳು ಸುಸೂತ್ರವಾಗಿ ನೆಡೆಯುತ್ತಿದೆ. ಇತ್ತೀಚೆಗೆ ಈ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ವಿಲೀನಗೊಂಡಿರುವುದರಿಂದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಎಂಬುದರ ಬದಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ರೊಪದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಇಂತಹ ಸಾಮಾಜಿಕ ಕಳಕಳಿ ಹೊಂದಿದ್ದ ಮಹಾನುಭಾವರನ್ನು ನೆನಪು ಮಾಡಿಕೊಳ್ಳವುದು ನಮ್ಮಲ್ಲರ ಆದ್ಯಕರ್ತವ್ಯ ಎಂದು ದೇವೇಗೌಡ ತಿಳಿಸಿದರು.
ಸಮಾರಂಭಕ್ಕೂ ಮುನ್ನ ನಾಲ್ವಡಿ ಕೃಷ್ಣರಾಜ ಒಡೆಯರರವರ ಭಾವ ಚಿತ್ರವನ್ನು ಹೊತ್ತ ಮೆರವಣಿಗೆಯು ಅರಮನೆಯ ಆವರಣದಲ್ಲಿರುವ ಶ್ರೀ ಜಿಲ್ಲೆ ವೆಂಕಟರಮಣ ಸ್ವಾಮಿ ದೇವಾಲಯದ ಮುಂಭಾಗದಿಂದ ಹೊರಟು ಅರಮನೆ ಉತ್ತರ ದ್ವಾರ, ಕೆ.ಆರ್.ವೃತ್ತ. ಡಿ.ಡಿ.ಅರಸು ರಸ್ತೆ, ಮೆಟ್ರೋಪೋಲ್ ವೃತ್ತದ ಮೂಲಕ ಸಾಗಿ ಕಲಾಮಂದಿರ ತಲುಪಿತು.
ಸಮಾರಂಭದಲ್ಲಿ ಮೇಯರ್ ಪುಷ್ಪಲತಾ ಜಗನ್ನಾಥ್, ಮೈಸೂರು ಜಿಲ್ಲಾ ಕ.ಸಾ.ಪ. ಅದ್ಯಕ್ಷ ಡಾ|| ವೈ.ಡಿ. ರಾಜಣ್ಣ, ಚಾಮರಾಜ ವಿಧಾನಸಭಾ ಕ್ಷೇತ್ರ ಶಾಸಕ ಎಲ್.ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್.ಚನ್ನಪ್ಪ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಧಿತರಿದ್ದರು.

Leave a Comment