ನಾಳೆ ಜೆಡಿಎಸ್ ಕಾರ್ಯಕರ್ತರ ಸಭೆ

ಕೆ.ಆರ್.ಪೇಟೆ. ಸೆ.11: ಇದೇ ಸೆ. 12ರಂದು ಗುರುವಾರ ಮಧ್ಯಾಹ್ನ 2ಗಂಟೆಗೆ ಪಟ್ಟಣದ ಜಯಮ್ಮ ಶಿವಲಿಂಗೇಗೌಡ ಸಮುದಾಯ ಭವನದ ಹೊರ ಆವರಣದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಜೆಡಿಎಸ್ ಪಕ್ಷದ ಹಿರಿಯ ನಾಯಕರು ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಿ.ಎಲ್.ದೇವರಾಜು ಅವರು ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಈ ಕಾರ್ಯಕರ್ತರ ಸಭೆಯನ್ನು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿಗಳಾದ ಎಚ್ ಡಿ ದೇವೇಗೌಡರು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿಯವರು, ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಜಿಲ್ಲಾಧ್ಯಕ್ಷ ಡಿ.ರಮೇಶ್, ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ, ಸಿ.ಎಸ್.ಪುಟ್ಟರಾಜು, ಸಾ.ರಾ.ಮಹೇಶ್, ಡಿ.ಸಿ.ತಮ್ಮಣ್ಣ, ಹಾಗೂ ಜಿಲ್ಲೆಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಜೆಡಿಎಸ್ ಪಕ್ಷದ ರಾಜ್ಯ ಮಟ್ಟದ, ಜಿಲ್ಲಾ ಮಟ್ಟದ ವಿಭಾಗೀಯ ಮಟ್ಟದ ಮುಖಂಡರುಗಳು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುವರು. ಪಕ್ಷದ ಶಾಸಕರಾಗಿದ್ದ ನಾರಾಯಣಗೌಡ ಅವರು ರಾಜೀನಾಮೆ ನೀಡಿರುವ ಕಾರಣ ಕೆಲವೇ ದಿನಗಳಲ್ಲಿ ಬರಲಿರುವ ಉಪಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗಾಗಿ ನಮ್ಮ ಪಕ್ಷದ ವರಿಷ್ಠರಾದ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಅವರು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಈ ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿದೆ ಹಾಗಾಗಿ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಬಿ.ಎಲ್.ದೇವರಾಜು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡರಾದ ಬಸ್ ಕೃಷ್ಣೇಗೌಡ, ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್.ಟಿ.ಮಂಜು, ಸದಸ್ಯರಾದ ರಾಮದಾಸ್, ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್.ಎಸ್.ರಾಜು, ಸದಸ್ಯ ಜಾನಕೀರಾಂ, ಪುರಸಭಾ ಕೆ.ಎಸ್.ಸಂತೋಷ್‍ಕುಮಾರ್, ಮುಖಂಡರಾದ ಕಸಬಾ ಹೋಬಳಿ ಜೆಡಿಎಸ್ ಅಧ್ಯಕ್ಷ ವಸಂತಕುಮಾರ್, ಎಪಿಎಂಸಿ ಅಧ್ಯಕ್ಷ ಹೆಚ್.ಆರ್.ನಾಗರಾಜೇಗೌಡ, ರಾಜ್ಯ ಯುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕೆ.ಬಿ.ನಾಗೇಶ್, ಬೇಲದಕೆರೆ ನಂಜೇಗೌಡ, ಬೊಮ್ಮೇನಹಳ್ಳಿ ಮಂಜುನಾಥ್, ಕಿಕ್ಕೇರಿ ಕುಮಾರ್ ಮತ್ತಿತರರು ಹಾಜರಿದ್ದರು.

Leave a Comment